ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿ ಅವಿತು ಕುಳಿತಿದ್ದ ಚಿರತೆ ಸೆರೆ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮುದ್ದಾಪುರ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಯೊಂದಕ್ಕೆ ನುಗ್ಗಿದ ಚಿರತೆ ಕಂಡು ಜನರು ಬೆಚ್ಚಿಬಿದ್ದಿದ್ದ ಘಟನೆ ನಡೆದಿದೆ. ಗ್ರಾಮಸ್ಥರನ್ನು ಆತಂಕಕ್ಕೀಡುಮಾಡಿದ್ದ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. 
ಗ್ರಾಮದ ಚಿದಾನಂದ ಎಂಬುವವರ ಮನೆಗೆ ಬೆಳಗಿನ ಜಾವ 5:30 ಸಮಯದಲ್ಲಿ ನುಗ್ಗಿದ್ದ ಚಿರತೆ ನುಗ್ಗಿ ಅವಿತು ಕುಳಿತಿದೆ. ಬಳಿಕ ಚಿರತೆ ಕಂಡ ಮನೆಯವರು ತಕ್ಷಣ ಹೊರಗೆ ಓಡಿ ಮಂದು ಮನೆಯ ಬೀಗ ಹಾಕಿದ್ದಾರೆ. ಬಳಿಕ ಗ್ರಾಮಸ್ಥರು ಸ್ಥಳಕ್ಕೆ ದಾವಿಸಿದ್ದು, ಈ ಕುರಿತಾಗಿ ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಚಿರತೆ ಸೆರೆಗೆ ಕೆಲ ಗಂಟೆ ಕಾರ್ಯಾಚರಣೆ ನಡೆಸಿದ ಬಳಿಕ ಯಶಸ್ವಿಯಾಗಿದ್ದಾರೆ. ಚಿರತೆ ಸೆರೆ ಹಿಡಿದ ಬಳಿಕ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.









