ಆಕ್ಸಿಜನ್ ಕೊರತೆಯಿಂದ ವೃದ್ಧ ಬಲಿ – ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ವಿಡಿಯೋ ಮಾಡಿ ಕಣ್ಣೀರಿಟ್ಟ ಮೊಮ್ಮಗಳು
ಚಿತ್ರದುರ್ಗ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ವೃದ್ಧರೊಬ್ಬರು ಆಕ್ಸಸಿಜನ್ ಸಿಗದೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಾಟನಾಯಕನಹಳ್ಳಿ ಗ್ರಾಮದ ರಾಮಪ್ಪ(75) ಮೃತ ವ್ಯಕ್ತಿಯಾಗಿದ್ದಾರೆ.
ಮತ್ತೊಂದೆಡೆ ಮೃತ ವೃದ್ಧನ ಮೊಮ್ಮಗಳು ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ವಿಡಿಯೋ ಮಾಡಿ ಕಣ್ಣೀರು ಹಾಕುತ್ತಾ ಆಕ್ರೋಶ ಹೊರಹಾಕಿದ್ದಾರೆ. ವಸಂತಕುಮಾರಿ ಎಂಬಾಕೆ ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ. ಮೃದೇಹದ ಬಳಿ ಸೆಲ್ಫಿ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಅಧಿಕಾರಿಗಳಿಗೆ, ಸಂಸದರು ಅಪ್ತರಿಗೆ, 108ಚಾಲಕರು ಅನೇಕರಿಗೆ ಕರೆ ಮಾಡಿದೆ. ಯಾರೊಬ್ಬರೂ ಸಹಾಯ ಮಾಡಲಿಲ್ಲ. ಆಸ್ಪತ್ರೆಯಲ್ಲಿ 5 ನಿಮಿಷ ಮಾತ್ರ ಆಕ್ಸಿಜನ್ ಕೊಡುತ್ತೇವೆಂದು ಹೇಳುತ್ತಾರೆ. ರಾತ್ರಿ ವೇಳೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂತಾರೆ ಎಂದು ಆರೋಪ ಮಾಡಿ ಗೋಳಾಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.