ಭಗತ್ ಸಿಂಗ್ ಪಾತ್ರದ ಅಭ್ಯಾಸ ವೇಳೆ ನೇಣು ಬಿಗಿದು ಬಾಲಕ ಸಾವು….
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಗತ್ ಸಿಂಗ್ ಪಾತ್ರವನ್ನ ಮಾಡುತ್ತಿದ್ದ ಹುಡುಗ ಮನೆಯಲ್ಲಿ ಅಭ್ಯಾಸ ಮಾಡಲು ಹೋಗಿ ನೇಣಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.ಈ ಬಾರಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಸಿದ್ಧತೆ ನಡೆಸುತ್ತಿದ್ದ.
ಎಸ್‌ಎಲ್‌ವಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಭಾರೀ ಸಿದ್ಧತೆ ನಡೆಸುತ್ತಿದ್ದ, ಮನೆಗೆ ಬಂದ ಬಳಿಕವೂ ಶನಿವಾರ ರಿಹರ್ಸಲ್‌ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇದೀಗ ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga: A boy hanged himself while practicing Bhagat Singh’s character…