ಚಿತ್ರದುರ್ಗ ( Chitradurga ) : ಆಕಸ್ಮಿಕ ಬೆಂಕಿ, 5 ಮನೆಗಳು ಭಸ್ಮ
ಚಿತ್ರದುರ್ಗ : ಆಕಸ್ಮಿಕ ಬೆಂಕಿ ತಗುಲಿ ಐದು ಮನೆಗಳು ಭಸ್ಮವಾಗಿರುವ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಆದಿವಾಲ ಗ್ರಾಮದಲ್ಲಿ ನಡೆದಿದೆ.
ಬೆಂಕಿಗೆ ಕಾರಣ ತಿಳಿದುಬಂದಿದ್ದು, ಆದ್ರೆ ಬೆಂಕಿಯ ಕೆನ್ನಾಲಿಗೆಗೆ ಐದು ಮನೆಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಇದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿದೆ.
ಇದರಿಂದ ಜನರು ಕಂಗಾಲಾಗಿದ್ದು, ಬೀದಿಗೆ ಬಿದ್ದಿದ್ದಾರೆ. ಇನ್ನು ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.