Chitradurga | ಡಿವೈಡರ್ ಕಾರು ಡಿಕ್ಕಿ – ಇಬ್ಬರು ಮಹಿಳೆಯರು ಸಾವು
ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ.
ಮಹಾರಾಷ್ಟ್ರ ಮೂಲದ 40 ವರ್ಷದ ಮಾನ್ಸಿ ಹಾಗೂ 44 ವರ್ಷದ ಉಜ್ವಲ್ ಬಾರ್ವಿ ಮೃತ ದುರ್ದೈವಿಗಳಾಗಿದ್ದಾರೆ.
ಈ ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿವೆ.
ಗಾಯಾಳುವಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ವಿಷಯ ತಿಳಿದು ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.