ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಚಿತ್ರದುರ್ಗ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯನ್ನು ವಿರೋಧ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ನಗರದ ಕಾಂಗ್ರೆಸ್ ಕಛೇರಿ ಮುಂದೆ ಸ್ಥಳೀಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
” ಅಗ್ನಿಪಥ್ ಯೋಜನೆ ಯುವ ಜನರನ್ನು ದಾರಿ ತಪ್ಪಿಸುವ ಯೋಜನೆಯಾಗಿದೆ. ಕೇವಲ ನಾಲ್ಕು ವರ್ಷಗಳ ಕಾಲ ಮಾತ್ರ ಕೆಲಸ ನೀಡಿ, ನಂತರ ನಿರುದ್ಯೋಗಿಗಳನ್ನಾಗಿ ಮಾಡುವ ಯೋಜನೆಯಾಗಿದೆ. ಸರ್ಕಾರಿ ಹುದ್ದೆಗಳ ಅವಕಾಶಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಯುವ ಪಡೆ ಈ ಯೋಜನೆಯ ಖಾಸಗಿ ಕಂಪನಿಗಳು ಮತ್ತು ಏಜೆನ್ಸಿಗಳ ವ್ಯವಸ್ಥಿತವಾಗಿ ಲಾಭ ಪಡೆದುಕೊಳ್ಳುವ ಯೋಜನೆಯಾಗಿದ್ದು, ಸೈನ್ಯದಲ್ಲೂ ಗುತ್ತಿಗೆ ಪದ್ಧತಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಕಾಂಗ್ರೆಸ್ ಮುಖಂಡ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ವಿಧಾನಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾಧ್ಯಕ್ಷ ತಾಜ್ ಪೀರ್, ಮುಖಂಡರಾದ ಜಿಎಸ್. ಮಂಜುನಾಥ್, ಜೆಜೆ ಹಟ್ಟಿ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ತಹಶೀಲ್ದಾರ್ ಗೆ ಮನವಿ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಅಗ್ನಿಪಥ್ ಯೋಜನೆ ವಿರೋಧಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

ಹಿರಿಯೂರಿನಲ್ಲೂ ಕಾಂಗ್ರೆಸ್ ಪ್ರತಿಭಟನೆ : ಜಿಲ್ಲೆಯ ಹಿರಿಯೂರು ನಗರದ ಬಿಇಓ ಕಛೇರಿ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದು ಯುವಕರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಒಂದು ವೇಳೆ ಯೋಜನೆ ಜಾರಿಗೆ ತರುವುದಾದರೆ ಮೊದಲು ಬಿಜೆಪಿ ನಾಯಕರ ಮಕ್ಕಳನ್ನು ಸೇನೆಗೆ ಸೇರಿಸಲಿ ನೋಡೋಣ ಎಂದರು. ಇಂತಹ ಯೋಜನೆಗಳನ್ನು ಜಾರಿಗೆ ತಂದು ಅಮಾಯಕರನ್ನು ಬಲಿ ಕೊಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರ ಹಾಕಿದರು. ಈ ಪ್ರತಿಭಟನೆಯಲ್ಲಿ ಮಾಜಿ ಸಚಿವ ಡಿ ಸುಧಾಕರ್, ನಗರಸಭೆ ಸದಸ್ಯರು ಸೇರಿದಂತೆ ಮತ್ತಿತರರು ಹಾಜರಿದ್ದರು.
ಉಳಿದಂತೆ ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಕಾರ್ಯಕರ್ತರು ಅಗ್ನಿಪಥ್ ಯೋಜನೆ ವಿರೋಧಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಈ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕರು, ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.








