ಚಿತ್ರದುರ್ಗ: ಮಂತ್ರಿ ಸ್ಥಾನ ನೀಡುವಲ್ಲಿ ಚಿತ್ರದುರ್ಗ ಜಿಲ್ಲೆಗೆ ನ್ಯಾಯ ಸಿಕ್ಕಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಜಿ. ಹೆಚ್. ತಿಪ್ಪಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಚಿತ್ರದುರ್ಗ ಜಿಲ್ಲೆಗೆ ಅನ್ಯಾಯವಾಗುತ್ತಲೆ ಇದೆ. ಹೊರಗಿನವರು ಬಂದು ಮಂತ್ರಿಯಾಗುತ್ತಾರೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗುತ್ತದೆ. ಭದ್ರಾ ಮೇಲ್ದಂಡೆ ಹಾಗೂ ರೈಲ್ವೇ ಮಾರ್ಗ ಇನ್ನಿತರೇ ಕಾಮಗಾರಿಗಳು ವಿಳಂಬವಾಗುತ್ತಿವೆ. ಇದರಿಂದ ಸ್ಥಳಿಯರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಐವರು ಶಾಸಕರು ಬಿಜೆಪಿಯಿಂದ ಆಯ್ಕೆಯಾಗಿದ್ದೇವೆ. ನಾನು ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷದಲ್ಲಿ ಹಿರಿಯರಿಗೆ ಗೌರವ ಸಿಗುತ್ತದೆ ಅಂದು ಕೊಂಡಿದ್ದೇನೆ. ಹೀಗಾಗಿಯೇ ನಾನು ಹೈ ಕಮಾಂಡ್ ಭೇಟಿ ಮಾಡಿಲ್ಲ. ನನ್ನನ್ನು ಇದುವರೆಗೂ ಯಾರೂ ಸಂಪರ್ಕ ಮಾಡಿಲ್ಲ. ಮುಖ್ಯಮಂತ್ರಿಗಳು ನನಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ನಂಬಿಕೆ ನನಗಿದೆ. ನಾನು ಯಾವುದೇ ಲಾಭಿ ಮಾಡಿಲ್ಲ, ಹೈಕಮಾಂಡ್ ಭೇಟಿ ಮಾಡಿಲ್ಲ ಎಂದು ತಿಪ್ಪಾರೆಡ್ಡಿ ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








