ಚಿತ್ರದುರ್ಗ ಜಿಲ್ಲೆಯ ಹಲವೆಡೆ ಭರಣಿ ಮಳೆಯ ಅಬ್ಬರ Chitradurga
ಚಿತ್ರದುರ್ಗ: ಬರದನಾಡು ಚಿತ್ರದುರ್ಗ ಜಿಲ್ಲೆಯ ಹಲವೆಡೆ ಭಾರಿ ವರ್ಷಧಾರೆ ಆಗುತ್ತಿದೆ.
ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ನಿನ್ನೆ ತಡರಾತ್ರಿ ದೋ ಅಂತ ಸುರಿದ ಮಳೆಗೆ ಚಿತ್ರದುರ್ಗದ ಸುಲ್ತಾನಿ ಪುರ, ಚಳ್ಳಕೆರೆಯ ದೇವರಹಳ್ಳಿ ಸೇರಿ ಹಲವೆಡೆ ಹಳ್ಳ-ಕೊಳ್ಳ ಭರ್ತಿ ಆಗಿವೆ.
ಗಂಟೆಗಟ್ಟಲೆ ಸುರಿದ ಭರ್ಜರಿ ಮಳೆಯಿಂದಾಗಿ ಚೆಕ್ ಡ್ಯಾಂ, ಕೃಷಿ ಹೊಂಡಗಳು ತುಂಬಿವೆ.
ಭರಣಿ ಮಳೆಯ ಆರ್ಭಟಕ್ಕೆ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.










