Chitradurga | ಹೊಳಲ್ಕೆರೆ ಶಾಸಕ ಬೆಂಬಲಿಗನಿಂದ ಗ್ರಾಪಂ ಸದಸ್ಯನ ಮೇಲೆ ಹಲ್ಲೆ!
ಚಿತ್ರದುರ್ಗ : ಜಿಲ್ಲೆಯ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಅವರ ಬೆಂಬಲಿಗ ಹಾಗೂ ಬಿಜೆಪಿ ಮುಖಂಡ ಡಿಸಿ ಮೋಹನ್ ಅವರು ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಾಟೆಹಳ್ಳಿಯ ಶಿವಕುಮಾರ್ ಅವರ ಪುತ್ರ ಚಿಕ್ಕಜಾಜೂರು ಗ್ರಾಮ ಪಂಚಾಯಿತಿ ಸದಸ್ಯ ಸಿದ್ದೇಶ್ ಅವರ ಮನೆಯ ಮುಂದೆಯೇ ಡಿಸಿ ಮೋಹನ್ ಇಟ್ಟಿಗೆಯಿಂದ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ.
ಇನ್ನು ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಗಲಾಟೆ ಯಾವ ವಿಚಾರಕ್ಕೆ ನಡೆದಿದೆ ಎಂದು ತಿಳಿದು ಬಂದಿಲ್ಲ.
ಇನ್ನು ಈ ಘಟನೆಯನ್ನು ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸಿದೆ ಹಾಗೂ ಡಿಸಿ ಮೋಹನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.