Chitradurga | ಸ್ವಾಮೀಜಿ ಅವರಿಗೆ ನೋವಾಗಿದೆ : ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ
ಚಿತ್ರದುರ್ಗ : ಪ್ರತಿಷ್ಠಿತ ಮಠದ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬರುತ್ತಿದ್ದು, ಈ ಬಗ್ಗೆ ಮುರುಘಾ ಮಠದ ಬಳಿ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಂದ ಸುದ್ದಿಯಿಂದ ಸ್ವಾಮೀಜಿ ಅವರಿಗೆ ನೋವಾಗಿದೆ ಎಂದು ಅವರು ತಿಳಿಸಿದ್ದಾರೆ
ಮಕ್ಕಳು ಮೈಸೂರು ಠಾಣೆಯಲ್ಲಿ ದೂರು ದಾಖಲಿಸಿರುವ ವಿಚಾರ ಗೊತ್ತಾಗಿದೆ. ದೂರಿನ ಪೂರ್ಣ ವಿವರ ನಮಗೆ ಗೊತ್ತಿಲ್ಲ.
ಇದರಿಂದ ಸ್ವಾಮೀಜಿ ಅವರಿಗೆ ಬಹಳ ನೋವಾಗಿದ್ದು, ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆದರೆ ಯಾವುದೋ ಮಠದ ವಿರೋಧಿ ಶಕ್ತಿ ಅತೀ ಆಸೆಯಿಂದ ಇಂಥ ಕೆಲಸ ಮಾಡಿಬಹುದು.

ಮಕ್ಕಳನ್ನ ದುರ್ಬಳಕೆ ಮಾಡಿಕೊಂಡು ದೂರು ನೀಡಿದ್ದಾರೆ ಎನ್ನಬಹುದು. ಇದರ ಹಿಂದೆ ವಿರೋಧಿ ಶಕ್ತಿಗಳ ಕೈವಾಡ ಇದೆ ಎಂದು ತಿಳಿದು ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಹೆಚ್ಚಿನದಾಗಿ ದೂರಿನ ಅಂಶಗಳು ಬಂದ ಮೇಲೆ ಸ್ವಾಮೀಜಿ ಮಾತನಾಡುತ್ತಾರೆ. ಈ ಕುರಿತು ಕಾನೂನು ಹೋರಾಟ ಮಾಡುತ್ತೇವೆ ಎಂದು ವಿಶ್ವನಾಥಯ್ಯ ಹೇಳಿದ್ದಾರೆ.
ಇನ್ನು ಅವರು ತಪ್ಪು ದೂರು ನೀಡಿದ್ದರೆ ಮುರುಘೇಶ ಅವರಿಗೆ ಬುದ್ದಿ ನೀಡಲಿ. ತಪ್ಪಿನ ಅರಿವಾಗಿ ಅವರು ಕೇಸ್ ವಾಪಸ್ ಪಡೆಯಲಿ. ಎಲ್ಲಾ ಭಕ್ತ ವೃಂದದ ಪರವಾಗಿ ದೇವರಲ್ಲಿ ಪ್ರಾರ್ಥಿಸುವೆ ಎಂದು ತಿಳಿಸಿದ್ದಾರೆ.








