ತಮಿಳು ನಟ ವಿಕ್ರಮ್ ಗೆ ಹೃದಯಾಘಾತ ?? ಚೆನೈ ಆಸ್ಪತ್ರೆಗೆ ದಾಖಲು…
ತಮಿಳಿನ ಖ್ಯಾತ ನಟ ಬಹುಮುಖ ಪ್ರತಿಭೆ ‘ಚಿಯಾನ್’ ವಿಕ್ರಮ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಚೆನ್ನೈ ಮೂಲದ ಮಾಧ್ಯಮ ವರದಿಗಳ ಪ್ರಕಾರ ವಿಕ್ರಮ್ ಅವರನ್ನ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಇಂದು ಸಂಜೆ 6 ಗಂಟೆಗೆ ಚೆನ್ನೈನಲ್ಲಿ ನಡೆಯಲಿರುವ ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ವಿಕ್ರಮ್ ಭಾಗವಹಿಸಬೇಕಿತ್ತು. ಹಠಾತ್ ಅನಾರೋಗ್ಯದ ಕಾರಣ ಅವರನ್ನು ಕಾವೇರಿ ಆಸ್ಪತ್ರೆಗೆ ಸಾಗಿಸಲಾಯಿತು. ವಿಕ್ರಮ್ಗೆ 56 ವರ್ಷ ವಯಸ್ಸಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ಬರಬೇಕಿದೆ..
ಚಿತ್ರ ವಿಮರ್ಶಕ ರಮೇಶ್ ಬಾಲಾ ಅವರು ಟ್ವಿಟ್ ಮಾಡಿ ಚಿಯಾನ್ ವಿಕ್ರಮ್ ತೀವ್ರ ಜ್ವರದಿಂದ ಬಳಲುತ್ತಿದ್ದು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಹಾರ್ಟ್ ಅಟ್ಯಾಕ್ ಆಗಿಲ್ಲ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಮೇಶ್ ಬಾಲಾ ಆವರು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಮ್ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಅಘಾತಕ್ಕೆ ಒಳಗಾಗಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ನಟನಾ ಕೌಶಲ್ಯಕ್ಕೆ ಹೆಸರುವಾಸಿಯಾಗಿರುವ ವಿಕ್ರಮ್ ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿದ್ದಾರೆ. ಪಿತಾಮಗನ್ ಮತ್ತು ಶಂಕರ್ ನಿರ್ದೇಶನದ ಅನ್ನಿಯನ್ ಚಿತ್ರಗಳು ಇವರಿಗೆ ರಾಷ್ಟ್ರ ಮನ್ನಣೆ ತಂದುಕೊಟ್ಟ ಚಿತ್ರಗಳು. ವಿಕ್ರಮ್ ತಮ್ಮ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ವಿಕ್ರಮ್ ಅವರ ಮುಂಬರುವ ಚಿತ್ರ ಕೋಬ್ರಾ ಆಗಸ್ಟ್ 11 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ.