ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಚೂಡಿ ಪೂಜೆ ಹಿಂದಿದೆ ಪ್ರಕೃತಿಯ ಪೂಜೆಯ ವಿಶಿಷ್ಟ ಪರಂಪರೆ ಏನಿದು ಚೂಡಿ ಪೂಜೆ?

Naveen Kumar B C by Naveen Kumar B C
July 27, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಚೂಡಿ ಪೂಜೆ ಹಿಂದಿದೆ ಪ್ರಕೃತಿಯ ಪೂಜೆಯ ವಿಶಿಷ್ಟ ಪರಂಪರೆ ಏನಿದು ಚೂಡಿ ಪೂಜೆ?

ಗೌಡ ಸಾರಸ್ವತ ಬ್ರಾಹ್ಮಣರಲ್ಲಿ
29.7.2022 ಶುಕ್ರವಾರ ಚೂಡಿ ಪೂಜೆ ಪ್ರಾರ೦ಭ

ಚೂಡಿ ಪೂಜೆ ಹಿಂದಿದೆ ಪ್ರಕೃತಿಯ ಪೂಜೆಯ ವಿಶಿಷ್ಟ ಪರಂಪರೆ
ಏನಿದು ಚೂಡಿ ಪೂಜೆ?:
ಶ್ರಾವಣ ಮಾಸದಲ್ಲಿ ಸೂರ್ಯ ಪರಮಾತ್ಮನು ತನ್ನ ಸ್ವ ಕ್ಷೇತ್ರ ಸಿಂಹ ರಾಶಿಯಲ್ಲಿ ಆಗಮಿಸಿದ ಸಂದರ್ಭ ಸೂರ್ಯದೇವನ ಬಿಂಬವನ್ನು ರಂಗೋಲಿಯಲ್ಲಿ ಬರೆದು ಅದರ ಹತ್ತಿರ ಪ್ರಕೃತಿಯಲ್ಲಿ ಸಿಗುವ ಗರಿಕೆ, ಬಣ್ಣ ಬಣ್ಣದ ಲಕ್ಷ್ಮಿ ಸಾನಿಧ್ಯವುಳ್ಳ ಹೂವುಗಳನ್ನು ಅರ್ಪಿಸಿ ಸೂರ್ಯನಿಗೆ ವಂದನೆ ಸಲ್ಲಿಸಲಾಗುತ್ತದೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ತುಳಸಿ ಸನ್ನಿಧಿಯಲ್ಲಿ ಶ್ರಾವಣ ಮಾಸದ ಪ್ರತಿ ಶುಕ್ರವಾರ ಮತ್ತು ಭಾನುವಾರ ನಡೆಯುವ ಚೂಡಿ ಪೂಜೆಯು ಗೌಡ ಸಾರಸ್ವತ ಕುಟುಂಬದ ಹಾಗೂ ಪರಿಸರದ ಮುತ್ತೈದೆಯರನ್ನು ಒಟ್ಟು ಸೇರುವಂತೆ ಮಾಡುತ್ತದೆ.

‘ಚೂಡಿ’ ಶಬ್ದವು ಕನ್ನಡದ ಸೂಡಿ ಅರ್ಥಾತ್‌ ಗಂಟು, ಗುಂಪು ಎನ್ನುವ ಅರ್ಥ ಹೊಂದಿದೆ. ಗರಿಕೆ ಹುಲ್ಲಿನೊಂದಿಗೆ ರಥ ಪುಷ್ಪ, ಕರವೀರ, ರತ್ನಗಂಧಿ, ಮಿಠಾಯಿ ಹೂವು ಹಾಗೂ ವೈವಿಧ್ಯಮಯ ಸಸ್ಯಗಳಾದ ಅನ್ವಾಳೆ, ಲಾಯೆಮಾಡ್ಡೊ, ನೆಲ ನೆಲ್ಲಿ, ಕಾಟ್‌ಚಿರ್ಡೋ, ಕಾಯ್‌ಳ್ಯಾದೋಳೋ ಮಜ್ರಾನಾಂಕುಟ, ಗಾಂಟಿಮಾಡ್ಡೊ ಇತ್ಯಾದಿ ನಿಸರ್ಗ ಸಹಜವಾಗಿ ಬೆಳೆಯುವ ಕಾಟು ಹೂಗಳನ್ನೆಲ್ಲಾ ಜೋಡಿಸಿ ಬಾಳೆ ಹಗ್ಗದಿಂದ ಒಟ್ಟಿಗೆ ಕಟ್ಟಿದರೆ ಅದೇ ಚೂಡಿ.

ಇವೆಲ್ಲಾ ಹೂವಿನ ಅಂಗಡಿಯಲ್ಲಿ ಲಭ್ಯವಿದ್ದರೂ ಮಹಿಳೆಯರು ಅದನ್ನು ಸುತ್ತಮುತ್ತಲಿನ ಪರಿಸರದಿಂದ ಸಂಗ್ರಹಿಸಿಯೇ ಕಟ್ಟಲು ಇಷ್ಟಪಡುತ್ತಾರೆ. ಪ್ರಾತಃ ಕಾಲದಲ್ಲಿ ಚೂಡಿ ಪೂಜೆ ಮಾಡಲು ಪ್ರಶಸ್ತ ಸಮಯ. ಬೇಗನೆ ಆಗದಿದ್ದಲ್ಲಿ ಮಧ್ಯಾಹ್ನ 12 ಗಂಟೆಯೊಳಗಾದರೂ ಪೂಜೆ ಮುಗಿಸಬೇಕು.

ಬೆಳಗ್ಗೆ ಮಂಗಲ ಸ್ನಾನ ಪೂರ್ವಕ ಸಾಂಪ್ರದಾಯಿಕ ಶೈಲಿಯ 18 ಮೊಳದ ಸೀರೆಯನ್ನು ಕಚ್ಚೆ ಹಾಕಿ ಉಡುವ ಮುತ್ತೈದೆಯರು ಬಾವಿ ದಂಡೆಗೆ ಹಳದಿ ಕುಂಕುಮ ಹಚ್ಚಿ, ಹೂವು ಇಟ್ಟು ನೀರಿಗೆ ಹರಿದ್ರಾ ಕುಂಕುಮ ಅರ್ಪಿಸಿ ಗಂಗಾ ಸ್ಮರಣ ಪೂರ್ವಕ ನೀರು ತೆಗೆದು ಮನೆ ಅಂಗಳದಲ್ಲಿ ತುಳಸಿ ಕಟ್ಟೆ ಎದುರು ರಂಗೋಲಿ ಹಾಕಿ, ಮನೆ ದ್ವಾರದ ಹೊಸ್ತಿಲಿಗೆ ಶೇಡಿ ಬರೆದು, ಅಲಂಕರಿಸಿ ಚೂಡಿ ಪೂಜೆ ಆರಂಭಿಸುತ್ತಾರೆ.

ದೀಪ ಹಚ್ಚಿ ಜಾಗಂಟೆ ಬಾರಿಸಿ ತುಳಸಿಗೆ ನೀರೆರೆದು ಅರಸಿನ ಕುಂಕುಮ, ಗಂಧ ಹಚ್ಚಿ , ವೀಳ್ಯ ಚೂಡಿ ಅರ್ಪಿಸಿ, ಹಣ್ಣುಕಾಯಿ, ಪಂಚ ಕಜ್ಜಾಯ ನೈವೇದ್ಯ ಮಾಡಿ ಆರತಿ ಬೆಳಗಲಾಗುತ್ತದೆ. ಬಳಿಕ ತುಳಸಿಗೆ 5 ಪ್ರದಕ್ಷಿಣೆ ಹಾಕಿ ಪ್ರತಿ ಸುತ್ತಿನಲ್ಲಿಯೂ ತುಳಸಿಗೂ ಸೂರ್ಯ ದೇವನಿಗೂ ಅಕ್ಷತೆ ಹಾಕುತ್ತಾರೆ.
ಕೆಲವೆಡೆ
(ತೆಂಗಿನ ಮರಕ್ಕೆ ಒಂದು ಚೂಡಿಯನ್ನು ಅರ್ಪಿಸಿ ಮಡಿದ ಹಿರಿಯರಿಗಾಗಿ ಮನೆಯ ಛಾವಣಿ ಮೇಲೆ ಒಂದು ಚೂಡಿ ಇಡಲಾಗುತ್ತದೆ. ಅತ್ತೆ ಮುತ್ತೈದೆಯಾಗಿ ಮಡಿದರೆ ಎರಡು ಚೂಡಿ ಇಡಲಾಗುತ್ತದೆ. )
ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದವರು ತಮ್ಮೂರ ದೇವಳಗಳಲ್ಲಿ ಸಾಮೂಹಿಕ ಚೂಡಿ ಒಟ್ಟಾಗಿ ಆಚರಿಸುವ ರೂಢಿಯಿದೆ.

ದೇವರ ಕೋಣೆಯಲ್ಲಿ ಜ್ಯೋತಿ ಬೆಳಗಿ, ಪತಿ ದೇವರಿಗೆ ಆರೋಗ್ಯ, ಆಯುಷ್ಯ, ಗೃಹಿಣಿಯರಿಗೆ ಮುತ್ತೈದೆ ಸೌಭಾಗ್ಯ ನೀಡಿ, ಕುಟುಂಬದ ಪ್ರೀತಿ ವಿಶ್ವಾಸ, ಸಂಬಂಧ, ಸಂತೋಷ ನಿರಂತರವಾಗಿ, ಉತ್ತಮ ರೀತಿಯಲ್ಲಿ ಇರಲು ಸೂರ್ಯದೇವನಲ್ಲಿ ಹಾಗೂ ತುಳಸಿ ಸನ್ನಿಧಿಯಲ್ಲಿ ಕುಲ ದೇವರನ್ನು ಸ್ಮರಿಸುತ್ತಾ ಪ್ರಾರ್ಥನೆ ಸಲ್ಲಿಸಲಾಗುತ್ತದೆ.

ಮನೆಯ ಪ್ರಧಾನ ಹೊಸ್ತಿಲಿಗೆ ಪೂಜೆ ಮಾಡಿ ಚೂಡಿ ಅರ್ಪಿಸಲಾಗುತ್ತದೆ. , ದೇವರ ಕೋಣೆಗೆ ಬಂದು ಕುಲದೇವರು, ಇಷ್ಟದೇವರು, ಗ್ರಾಮ ದೇವರನ್ನು ಸ್ಮರಿಸಿ ಶ್ರೀದೇವರ ಸನ್ನಿಧಿಯಲ್ಲಿ ಚೂಡಿ ಅರ್ಪಿಸಲಾಗುತ್ತದೆ. ಪೂಜಿಸಿದ ಚೂಡಿಯನ್ನು ಮುಡಿವ ಮುತ್ತೈದೆಯರು ತಮ್ಮ ಪತಿಗೆ ವೀಳ್ಯ ನೀಡಿ ಆಶೀರ್ವಾದ ಪಡೆಯುತ್ತಾರೆ. ಹಿರಿಯರು, ಸಂಬಂಧಿಕರ ಮನೆಗೆ ತೆರಳಿ ಚೂಡಿ ನೀಡುತ್ತಾರೆ. ಚೂಡಿ ನೀಡುವುದರಿಂದ ಕುಟುಂಬ, ನೆರೆಹೊರೆಯವರ ಜತೆ ಪ್ರೀತಿ, ವಿಶ್ವಾಸ ವೃದ್ಧಿಯಾಗಿ ಸಂಬಂಧ ಶಾಶ್ವತವಾಗಲು ಸಹಕಾರಿಯಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ದೂರದ ಊರಿಗೆ ಅಂಚೆ ಮೂಲಕ ಚೂಡಿ ಕಳುಹಿಸಿ, ತಮ್ಮ ಸಂಬಂಧ, ಪ್ರೀತಿ ವಿಶ್ವಾಸ ನಿರಂತರ ಇರಲು ಪತ್ರ ಬರೆದು ಆಶೀರ್ವಾದವನ್ನೂ ಪಡೆಯುವುದಿತ್ತು.

ಗೌಡ ಸಾರಸ್ವತ ಬ್ರಾಹ್ಮಣರು ಪವಿತ್ರ ವೃಕ್ಷ, ಜಲ, ಸೂರ್ಯ, ಪ್ರತಿಮೆಯಲ್ಲಿ ದೇವರನ್ನು ಆರಾಧಿಸಿದರೆ ಸ್ತ್ರೀಯರು ಶ್ರಾವಣ ಮಾಸದಲ್ಲಿ ತುಳಸಿ ಸನ್ನಿಧಿಯಲ್ಲಿ ದೇವರನ್ನು ಆರಾಧಿಸುತ್ತಾರೆ. ಮಕ್ಕಳನ್ನೂ ಚೂಡಿ ಪೂಜೆಯಲ್ಲಿ ತೊಡಗಿಸಿದರೆ, ಮಾಹಿತಿ, ಮಾರ್ಗದರ್ಶನ ನೀಡಿದರೆ ಮುಂದಿನ ಪೀಳಿಗೆಗೂ ಚೂಡಿ ಪೂಜೆಯ ಸಂಪ್ರದಾಯ ಉಳಿಯಲಿದೆ, ಮಹತ್ವ ಅರಿತುಕೊಳ್ಳುವಂತಾಗಲಿದೆ.

Tags: Chudi Pujanature worship
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram