ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿ (Ramesh Jarkiholi) ಮಾಲೀಕತ್ವದ ಸಕ್ಕರೆ ಕಾರ್ಖಾನೆ (ugar factory) ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾರ್ಖಾನೆ ಸ್ಥಾಪಿಸಿಲು 439 ಕೋಟಿ ರೂ. ಹಣವನ್ನು ಅಫೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ಪರುಪಾವತಿ ಮಾಡದ ಹಿನ್ನೆಲೆಯಲ್ಲಿ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹತ್ತಿರ ಇರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಾರ್ಖಾನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಜನವರಿ 5ರಂದು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನಲ್ಲಿ ಸಾಲ (Loan) ಪಡೆದು ಪಾವತಿಸದೇ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಬೆಂಗಳೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸಾಲ ಪಡೆದ ವೇಳೆ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್ ಮತ್ತು ಶಂಕರ್ ನಿರ್ದೇಶಕರಾಗಿದ್ದರು. ಆದರೆ, ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ಇತ್ತು. ಈ ಸಂದರ್ಭದಲ್ಲಿಯೇ ರಾಜೀನಾಮೆ ಸಲ್ಲಿಸಿದ್ದು, ಸಂಬಂಧಪಡದ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ. ಈ ವಿಷಯವನ್ನು ಬ್ಯಾಂಕ್ ಗಮನಕ್ಕೂ ತಂದಿರದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.
ಆನಂತರ ಜಾರಕಿಹೊಳಿ ದೂರು ಮತ್ತು ಎಫ್ಐಆರ್ ರದ್ದುಗೊಳಿಸಲು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತ ರಾಜ್ಯ ಸರ್ಕಾರವು ತನಿಖೆಗೆ ಸಿಐಡಿಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.