ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ, ಬಿ ನಾಗೇಂದ್ರ ಸಂಪುಟ ಸೇರ್ಪಡೆ ಸಮರ್ಥಿಸಿಕೊಂಡ ಗೃಹ ಸಚಿವರು : 52 ವರ್ಷ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದವರು ನಮಗೆ ದೇಶಪ್ರೇಮದ ಪಾಠ ಮಾಡಬೇಕಿಲ್ಲ-ಪ್ರಿಯಾಂಕ್ ಖರ್ಗೆ

Shwetha by Shwetha
August 19, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಐಡಿ ತನಿಖೆಯಿಂದ ಕ್ಲೀನ್‌ಚಿಟ್ ಸಿಕ್ಕಿರುವ ಹಿನ್ನೆಲೆಯಲ್ಲಿಯೇ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ವಿಧಾನ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೇಲಿನ ಆರೋಪ ಹಾಗೂ ವಿಪಕ್ಷಗಳ ಟೀಕೆಗೆ ಸರಣಿ ತಿರುಗೇಟು ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರದ ಆರೋಪ ಕೇಳಿಬಂದ ತಕ್ಷಣವೇ ಸರ್ಕಾರಕ್ಕೆ ಯಾವುದೇ ರೀತಿಯ ಮುಜುಗರ ಉಂಟಾಗಬಾರದು ಎಂಬ ಉನ್ನತ ಉದ್ದೇಶದಿಂದ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ತನಿಖೆ ನಡೆಸಿದ ಸಿಐಡಿ ಸಂಸ್ಥೆಯು ನಾಗೇಂದ್ರ ಅವರ ಪಾತ್ರವಿಲ್ಲ ಎಂದು ವರದಿ ನೀಡಿದೆ. ಯಾವುದೇ ನ್ಯಾಯಾಲಯವೂ ಅವರನ್ನು ಅಪರಾಧಿ ಎಂದು ಘೋಷಿಸಿಲ್ಲ. ಹೀಗಿರುವಾಗ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ. ಈ ಹಿಂದೆ ತಮ್ಮ ಆಡಳಿತಾವಧಿಯಲ್ಲಿ ವಿಧಾನಸೌಧವನ್ನು ವ್ಯಾಪಾರಸೌಧವನ್ನಾಗಿ ಮಾಡಿಕೊಂಡಿದ್ದ ಬಿಜೆಪಿಯವರು ಇಂದು ನೀತಿಪಾಠ ಹೇಳುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Related posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

August 19, 2026
ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

August 19, 2026

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಮತ್ತು ಅನುದಾನವನ್ನು ತಡೆಹಿಡಿಯಲಾಗಿದೆ. ಈ ಮುಖ್ಯ ವಿಷಯದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನಾಯಕರು ಅನಗತ್ಯ ವಿವಾದಗಳನ್ನು ಹುಟ್ಟುಹಾಕುತ್ತಿದ್ದಾರೆ. ವಂದೇ ಮಾತರಂ ಗೀತೆಗೆ ಸೋನಿಯಾ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಬಿಜೆಪಿಯ ಆರೋಪ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಆರ್‌ಎಸ್‌ಎಸ್ ತನ್ನ ಪ್ರಧಾನ ಕಚೇರಿಯ ಮೇಲೆ ಬರೋಬ್ಬರಿ 52 ವರ್ಷಗಳ ಕಾಲ ರಾಷ್ಟ್ರಧ್ವಜವನ್ನೇ ಹಾರಿಸಿಲ್ಲ. ಅಂತಹವರು ಕಾಂಗ್ರೆಸ್‌ಗೆ ದೇಶಪ್ರೇಮದ ಪಾಠ ಹೇಳಿಕೊಡುವ ಅಗತ್ಯವಿಲ್ಲ. ಇತ್ತೀಚೆಗೆ ರಾಷ್ಟ್ರಗೀತೆ ನುಡಿಸುವಾಗ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಹೇಗೆ ಹೊರನಡೆದರು ಎಂಬುದನ್ನು ಇಡೀ ದೇಶ ನೋಡಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಕುರಿತು ಬಿಜೆಪಿಯ ವಿಮರ್ಶೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬಿಜೆಪಿ ನಾಯಕರು ಮೊದಲು ಕೇಂದ್ರ ಸಂಪುಟ ಪುನರ್‌ರಚನೆ ಮತ್ತು ಅಲ್ಲಿನ ಪ್ರಾತಿನಿಧ್ಯದ ಬಗ್ಗೆ ಗಮನಹರಿಸಲಿ. ನಮ್ಮ ಮುಖ್ಯಮಂತ್ರಿಗಳು ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಎಲ್ಲರಿಗೂ ಸೂಕ್ತ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಯಶಸ್ವಿಯಾಗಿ ಆಡಳಿತ ನಡೆಸುತ್ತಿದ್ದಾರೆ ಎಂದರು.

ಇದೇ ವೇಳೆ ಇತ್ತೀಚೆಗೆ ರಾಜ್ಯದಲ್ಲಿ ವರದಿಯಾಗಿರುವ ಪೊಲೀಸರ ಮೇಲಿನ ಹಲ್ಲೆ ಘಟನೆಗಳ ವಿರುದ್ಧ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ಮತ್ತು ಬೆಂಗಳೂರಿನಲ್ಲಿ ನಡೆದಿರುವ ಘಟನೆಗಳು ರಾಜಕಾರಣಿಗಳು ತಲೆತಗ್ಗಿಸುವಂತಿವೆ. ಸಾರ್ವಜನಿಕರ ರಕ್ಷಣೆಗೆ ನಿಲ್ಲುವ ಪೊಲೀಸರ ಕೊರಳಪಟ್ಟಿ ಹಿಡಿಯುವುದು, ಕಪಾಳಮೋಕ್ಷ ಮಾಡುವುದು ಅಥವಾ ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಹಲ್ಲೆ ನಡೆಸಿದವರು ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದವರಾಗಿರಲಿ, ಕಾನೂನಿನ ಮುಂದೆ ಎಲ್ಲರೂ ಒಂದೇ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬೆಂಗಳೂರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಿಸಿ, ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ಕಾರಿ ಅಧಿಕಾರಿಗಳ ಮೇಲೆ ಕ್ಷುಲ್ಲಕ ಕಾರಣಕ್ಕೆ ದೌರ್ಜನ್ಯ ನಡೆಸಿದರೆ ಸರ್ಕಾರ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಆಡಳಿತದಲ್ಲಿ ಏನಾದರೂ ಲೋಪಗಳಿದ್ದರೆ ಅಧಿಕೃತವಾಗಿ ದೂರು ನೀಡಲಿ, ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗೃಹ ಸಚಿವರು ಖಡಕ್ ಸಂದೇಶ ರವಾನಿಸಿದರು.

ShareTweetSendShare
Join us on:

Related Posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

by Shwetha
August 19, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ,...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

by Shwetha
August 19, 2026
0

ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಅನ್ನು ಸಂಪೂರ್ಣವಾಗಿ ಹಾಡುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್...

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

by Shwetha
August 19, 2026
0

ಪಣಜಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 19, 2026
0

ದಿನ ಭವಿಷ್ಯ: 19-08-2026. ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram