ಬೆಂಗಳೂರು: ಮುಡಾ ಹಗರಣದ ಫೈಟ್ ಈಗಾಗಲೇ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯೆ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿಗೆ ಶಾಕ್ ನೀಡಬೇಕೆಂಬ ನಿಟ್ಟಿನಲ್ಲಿ ಪೋಕ್ಸೋ ಕೇಸಲ್ಲಿ ಯಡಿಯೂರಪ್ಪ (BS Yediyurappa) ಬಂಧಿಸಿದಂತೆ ನೀಡಿರುವ ಮಧ್ಯಂತರ ರಕ್ಷಣೆ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ.
ಈ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಸಿಐಡಿ ಎಸ್ಪಿಪಿ ಎಸ್ಪಿಪಿ ಅಶೋಕ್ ನಾಯ್ಕ್ ಅವರಿಂದ ಹೈಕೋರ್ಟ್ಗೆ (Karnataka Highcourt) ಅರ್ಜಿ ಸಲ್ಲಿಸಲಾಗಿದೆ.
ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಕೋರ್ಟ್ ಯಡಿಯೂರಪ್ಪ ಪರ ವಕೀಲರ (BSY Advocate) ಮನವಿ ಮೇರೆಗೆ ಆಗಸ್ಟ್ 30ಕ್ಕೆ ಮುಂದೂಡಿದೆ. ಹೀಗಾಗಿ ಮತ್ತೆ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.