ಮಡಿಕೇರಿ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಕಾರಿನಲ್ಲಿ ಬಂದಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕು ಸಿಐಡಿ. ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಆಂದ್ರಪ್ರದೇಶ ರಾಜ್ಯದ ಕರ್ನೂಲ್ ಜಿಲ್ಲೆಯ ಲಕ್ಷ್ಮಣ, ರಾಮಪೋಗು, ನಾಗೇಶ ಮತ್ತು ತೆಲಂಗಾಣ ರಾಜ್ಯದ ಮೆಹಬೂಬ್ ನಗರ ಜಿಲ್ಲೆಯ ತೆಲುಗು ತಿಮ್ಮಪ್ಪ ಬಂಧಿತ ಆರೋಪಿಗಳು.
ವಿನಾಶದಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಯನ್ನು 1.50ಲಕ್ಷಕ್ಕೆ ಮಾರಾಟ ಮಾಡಲೆಂದು ಬೆಂಗಳೂರಿನಿಂದ ಕೊಡಗು ಜಿಲ್ಲೆಯ ಗೋಣಿಕೊಪ್ಪಕ್ಕೆ ವೇರಿಟೋ ಕಾರಿನಲ್ಲಿ ಆರೋಪಿಗಳು ಬಂದಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ನಕ್ಷತ್ರ ಆಮೆ ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ
ಕೊಡಗು: ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ರಕ್ಷಿಸುವಲ್ಲಿ ಹಿಂದು ಜಾಗರಣಾ ವೇದಿಕೆ ಯಶಸ್ವಿಯಾಗಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದ ಬಳಿ ಗೂಡ್ಸ್ ವಾಹನದಲ್ಲಿ ತನ್ವಿರ್ ಎಂಬಾತ ಸಾಗಿಸುತ್ತಿದ್ದ ವೇಳೆ ಈ ಕಾರ್ಯಚರಣೆ ನಡೆದಿದ್ದು, ಗೋವುಗಳನ್ನು ರಕ್ಷಿಸಿ, ವಾಹನ ಹಾಗೂ ಚಾಲಕನನ್ನು ಪೊಲೀಸರ ವಶಕ್ಕೆ ನೀಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








