ಬೆಂಗಳೂರು: ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ ಬಂದವರಿಂದ ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದೆ ಎಂಬ ಬಗ್ಗೆ ದೇಶದಲ್ಲಿ ಹೆಚ್ಚಾಗಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕೆಲವರು ಬೆಂಕಿ ಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸವನ್ನು ಮಾಡ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದರ ಬಗ್ಗೆ ಈಗಾಗಲೇ ಕಮೀಷನರ್ ಮಾತನಾಡಿದ್ದಾರೆ. ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಇಂದಿರಾ ಕ್ಯಾಂಟೀನ್ ಬಗ್ಗೆ ಮಾತನಾಡಿದ ಅವರು, ಕೊರೊನಾ ಪರಿಹಾರ ನಿಧಿಗೆ ಪಕ್ಷದ ಎಲ್ಲ ಶಾಸಕರು, ಸಂಸದರು, ಮಾಜಿ ಶಾಸಕರಿಗೆ ದೇಣಿಗೆ ನೀಡಬೇಕೆಂಬ ಮನವಿಗೆ ಸ್ಪಂದಿಸುತ್ತಿದ್ದಾರೆ.ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್ ನಿಲ್ಲಿಸಬಾರದು. ಉದ್ಯೋಗ ಸಿಗುವವರೆಗೂ ಬಡವರಿಗೆ ಊಟ, ತಿಂಡಿ ನಿಲ್ಲಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.








