CISF Head Constable Recruitment 2025 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಹೆಡ್ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 403 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಪುರುಷ 204
ಮಹಿಳೆ 199
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ನಿಗದಿಪಡಿಸಿದ ಕ್ರೀಡೆಗಳಲ್ಲಿ ರಾಜ್ಯ/ ರಾಷ್ಟ್ರ/ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರಬೇಕು.
ವಯೋಮಾನ : ದಿನಾಂಕ 01/08/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಟ್ರೈಲ್ ಟೆಸ್ಟ್, ಪ್ರೊಫಿಸಿಎನ್ಸಿ ಟೆಸ್ಟ್, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಫಿಸಿಕಲ್ ಸ್ಟಾಂಡರ್ಡ್ :
ಫಿಸಿಕಲ್ ಸ್ಟಾಂಡರ್ಡ್ ಪುರುಷ ಮಹಿಳೆ
ಎತ್ತರ 160 cms 153 cms
ಎದೆ ಸುತ್ತಳತೆ 81-86 cms –
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು.
• ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 18, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 06, 2025
Website:https://cisfrectt.cisf.gov.in/index.php








