ಸಚಿವ ಲಕ್ಷ್ಮಿ ಹೆಬ್ಬಾಳ್ಳರ್ ಬಗ್ಗೆ ಬಿಜೆಪಿ MLC ಸಿಟಿ ರವಿ ಅಶ್ಲೀಲ ಪದಗಳನ್ನು ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಹೈಕೋರ್ಟ್ ಅವರಿಗೆ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್, ಜನವರಿ 30ರವರೆಗೆ ಸಿಟಿ ರವಿಯ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲು ಅನುಮತಿ ಇಲ್ಲ ಎಂದು ಆದೇಶಿಸಿದೆ.
ಈ ವಿಚಾರದಲ್ಲಿ SSP ಬಿಎ ಬೆಳ್ಳಿಯಪ್ಪ, ಸಿಟಿ ರವಿಯ ವಿರುದ್ಧ ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗುವಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದರು. ಅವರು, ಇಂತಹ ಕ್ರಿಮಿನಲ್ ಕೃತ್ಯಗಳಿಗೆ ಯಾವುದೇ ವಿನಾಯಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಾವು ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಹೈಕೋರ್ಟ್ ಪ್ರಸ್ತಾಪಿಸಿದ್ದು, ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.








