ನವದೆಹಲಿ : ಪ್ರಸಕ್ತ ವರ್ಷದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಅಕ್ಟೋಬರ್ 4 ರಂದು ನಡೆಯಲಿದೆ ಎಂದು ಕೇಂದ್ರ ಲೋಕ ಸೇವಾ ಆಯೋಗ ತಿಳಿಸಿದೆ.
ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಮೇ 31 ಕ್ಕೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿತ್ತು. ಇದೀಗ ಆ ಪರೀಕ್ಷೆ ಅಕ್ಟೋಬರ್ 4 ರಂದು ನಡೆಸಲು ಯುಪಿಎಸ್ ಸಿ ತೀರ್ಮಾನಿಸಿದೆ. ಮುಖ್ಯ ಪರೀಕ್ಷೆ 2021 ಜನವರಿ 8 ರಿಂದ ಐದು ದಿನಗಳ ಕಾಲ ನಡೆಯಲಿದೆ. ಇನ್ನೂ ಕಳೆದ ವರ್ಷದ ನಡೆದ ನಾಗರಿಕ ಸೇವಗಳ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಜುಲೈ 20 ರಂದು ವ್ಯಕ್ತಿತ್ವ ಪರೀಕ್ಷೆ ನಡೆಯಲಿದೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ 2020 ಸೆಪ್ಟೆಂಬರ್ 6 ರಂದು ನಡೆಯಲಿದೆ. ಏನಾದರೂ ತುರ್ತು ಅನಿವಾರ್ಯ ಸಂದರ್ಭದ ಒದಗಿ ಬಂದರೆ ಮಾತ್ರ ದಿನಾಂಕ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ. ಇಲ್ಲವಾದಲ್ಲಿ ಯಥಪ್ರಕಾರ ಪರೀಕ್ಷೆಗಳು ನಡೆಯಲಿವೆ ಎಂದು ಕೇಂದ್ರ ಲೋಕ ಸೇವಾ ಆಯೋಗ ತಿಳಿಸಿದೆ.