ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಮ್ಮಾರಿಯಂತೆ ಮುನ್ನುಗ್ಗುತ್ತಿರುವ ಕೊರೊನಾಗೆ ಬಿಬಿಎಂಪಿಯ ಪೌರ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ. ನಗರದ ವಿಶ್ವನಾಥ ನಾಗೇನಹಳ್ಳಿಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 28 ವರ್ಷ ಶಿಲ್ಪಾ ಮೃತಪಟ್ಟಿದ್ದಾರೆ.
ಶಿಲ್ಪಾ ಅವರಿಗೆ ನಿನ್ನೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗೆಂದು ಮೊದಲು ವಸಂತನಗರದ ವಿಕ್ರಂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಯೂ ಚಿಕಿತ್ಸೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ಕಾರಣ, ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬೆಡ್ ಇಲ್ಲ ಎಂದು ನೆಪಹೇಳಿದ ಕಾರಣ ಬೇರೆ ದಾರಿಯಿಲ್ಲದೆ ಅಂಬೇಡ್ಕರ್ ಮೆಡಿಕಲ್ ಕಾಲೇಜಿಗೆ ಕರೆತಂದಿದ್ದಾರೆ. ಅಷ್ಟರೊಳಗೆ ಆಸ್ಪತ್ರೆಗಳಿಗೆ ಅಲೆದಾಡಿ ಮತ್ತಷ್ಟು ಅಸ್ವಸ್ಥಗೊಂಡಿದ್ದ ಶಿಲ್ಪಾ ಅವರನ್ನು ಅಂಬೇಡ್ಕರ್ ಕಾಲೇಜಿನಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಶಿಲ್ಪಾ ಮೃತಪಟ್ಟಿದ್ದಾರೆ. ಸೋಂಕು ಧೃಢಪಟ್ಟ ಒಂದೇ ದಿನದಲ್ಲಿ ಹೆಮ್ಮಾರಿ ಶಿಲ್ಪಾ ಅವರ ಉಸಿರು ನಿಲ್ಲಿಸಿರುವುದು ಕೊರೊನಾ ಭೀಕರತೆಗೆ ಸಾಕ್ಷಿಯಾಗಿದೆ.
ಪೌರ ಕಾರ್ಮಿಕರಿಗೆ ಬಿಬಿಎಂಪಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಪೌರ ಕಾರ್ಮಿಕ ಮಹಿಳೆ ಸಾವು ಸಂಭವಿಸಿದೆ. ಇಬ್ಬರು ಪುಟ್ಟ ಮಕ್ಕಳನ್ನು ಬಿಟ್ಟು ನಿಧರಾದ ಈ ಕುಟುಂಬಕ್ಕೆ ಆಸರೆ ಯಾರು. ಇದು ಬಿಬಿಎಂಪಿ ಅಧಿಕಾರಿ ದಿವ್ಯ ನಿರ್ಲಕ್ಷ್ಯ ಮುಂದುವರೆದಿದ್ದು, ಪೌರ ಕಾರ್ಮಿಕರಿಗೆ ಸೂಕ್ತ ಆರೋಗ್ಯ ವ್ಯವಸ್ಥೆ ಇಲ್ಲ ಎಂದು ಪೌರಕಾರ್ಮಿಕರ ಒಕ್ಕೂಟದ ಮುಖಂಡರು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...








