ಕಾರವಾರ: ವಿದ್ಯಾರ್ಥಿಯೊಬ್ಬಾತ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಡಲಗಿ ಗ್ರಾಮದಲ್ಲಿ ನಡೆದಿದೆ. ಸ್ನೇಹಿತರೆಲ್ಲ ಕೆರೆಯಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬನವಾಸಿಯ ಸಮೀಪದ ಮಧುರವಳ್ಳಿ ಗ್ರಾಮದ ರಾಮ್ ಕುಮಾರ ಸಾವನ್ನಪ್ಪಿದ ವಿದ್ಯಾರ್ಥಿ ಎನ್ನಲಾಗಿದೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.