ಬೆಂಗಳೂರು: ಟ್ಯೂಷನ್ ಟೀಚರ್ ಒಬ್ಬಾತ ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿರುವ ಘಟನೆ ನಡೆದಿದೆ.
ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಟೀಚರ್ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕನಕಪುರ ಮೂಲದ ಬಾಲಕಿ ತಂದೆ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ ಎಂಬಾತ ವಿದ್ಯಾರ್ಥಿನಿಯನ್ನು ಅಪಹರಿಸಿದ್ದಾನೆ ಎನ್ನಲಾಗಿದೆ.
ನ.23 ರಂದು ಎಂದಿನಂತೆ ಆರೋಪಿ ಬಳಿ ಟ್ಯೂಷನ್‌ಗೆ ವಿದ್ಯಾರ್ಥಿನಿ ಬಂದಿದ್ದಳು. ಟ್ಯೂಷನ್ ಮುಗಿದು ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಆಗ ಟ್ಯೂಷನ್ ಸೆಂಟರ್ ಬಳಿ ಹೋದಾಗ ಬಾಲಕಿಯನ್ನ ಟ್ಯೂಷನ್ ಟೀಚರ್ ಕರೆದೊಯ್ದಿರೋದು ಗೊತ್ತಾಗಿದೆ.
ಬಾಲಕಿಯನ್ನ ಕರೆದೊಯ್ಯುವ ವೇಳೆ ಮನೆಯ ರೂಂನಲ್ಲೇ ಮೊಬೈಲ್ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ನಲವತ್ತು ದಿನಗಳಿಂದ ಸಣ್ಣ ಸುಳಿವು ಸಿಗದಂತೆ ಅಪ್ರಾಪ್ತೆ ಜೊತೆ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಪೊಲೀಸರು ಕಳೆದ ನಲವತ್ತು ದಿನಗಳಿಂದ ಬೆಂಗಳೂರು ರಾಮನಗರ, ಕನಕಪುರ ಸೇರಿ ಹಲವು ಕಡೆ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ. ಅಲ್ಲದೇ, ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...








