ಜೈಪುರ್: 5ನೇ ತರಗತಿಯ ಬಾಲಕಿಯರಿಗೆ ಶಿಕ್ಷಕನೇ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪವೊಂದು ಕೇಳಿ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ (Rajasthan) ಸರ್ಕಾರಿ ಶಾಲೆ ಶಿಕ್ಷಕನನ್ನು (Teacher) ಟೋಂಕ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಲಾಯಿಕ್ ಅಹ್ಮದ್ ಖುರೇಷಿ ಬಂಧಿತ ಆರೋಪಿ. ಆರೋಪಿಯು ತನ್ನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಆರೋಪಿಯು ಗೋಪಾಲಪುರ ಗ್ರಾಮದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. 5ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಬಾಲಕಿಯರ ಕುಟುಂಬದವರು ಖುರೇಷಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಿದ್ದರು. ಆರೋಪಿ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.