ಚಿಕ್ಕಮಗಳೂರು: 7ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆಯೊಂದು ನಡೆದಿದೆ.
ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಈ ಘಟನೆ ಮೂಡಿಗೆರೆ (Mudigere) ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.
ಸೃಷ್ಟಿ (13) ಸಾವನ್ನಪ್ಪಿದ ವಿದ್ಯಾರ್ಥಿನಿ ಎನ್ನಲಾಗಿದೆ. ಇಂದು ಎಂದಿನಂತೆ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಅಷ್ಟರಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.