ಚಿಕ್ಕಬಳ್ಳಾಪುರ : ಸೂಳೆಪಾಳ್ಯದ ಬೆಟ್ಟದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಶಿಲುಬೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ತೆರವುಗೊಳಿಸಿದೆ.
ಸರ್ಕಾರಿ ಗೋಮಾಳ ಜಾಗದಲ್ಲಿ ಅನಧಿಕೃತವಾಗಿ ಶಿಲುಬೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತ ಮೊಕದಮ್ಮೆ ದಾಖಲಿಸಿದ್ದರು.
ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಶಿಲುಬೆ ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿತ್ತು.
ಕೋರ್ಟ್ ನ ಆದೇಶದ ಮೇರೆಗೆ ಇಂದು ಎ.ಸಿ ರಘುನಂದನ್ ನೇತೃತ್ವದಲ್ಲಿ ಶಿಲುಬೆಯನ್ನ ತೆರವು ಮಾಡಿ ಜಾಗವನ್ನ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇನ್ನು ಅಧಿಕಾರಿಗಳು ಶಿಲುಬೆಯನ್ನು ತೆರವುಗೊಳಿಸಲು ಮುಂದಾಗುತ್ತಿದ್ದಂತೆ ಸ್ಥಳೀಯ ಕ್ರೈಸ್ತ ಸಮುದಾಯದವರು ಸೊಳೆಪಾಳ್ಯದ ಬೆಟ್ಟದ ಬಳಿ ಆಗಮಿಸಿ ಪ್ರತಿಭಟನೆ ನಡೆಸಿದರು.
ಶಿಲುಬೆ ತೆರವಿಗೆ ವಿರೋಧ ವ್ಯಕ್ತವಾಗುವ ಮುನ್ಸೂಚನೆ ಇದ್ದ ಕಾರಣ ಚಿಕ್ಕಬಳ್ಳಾಪುರ ಎಸ್ ಪಿ ಮಿಥುನ್ ಕುಮಾರ್ ಸೂಳೆಪಾಳ್ಯದ ಬಳಿ ನೂರಾರು ಪೊಲೀಸರನ್ನು ನಿಯೋಜನೆ ಮಾಡಿದ್ದರು.








