ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ವಾಹನ ಪೋಟೋ ಕಳಿಸಿದರೆ 500 ಬಹುಮಾನ…
ರಸ್ತೆಗಳ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿರುವ ವಾಹನದ ಚಿತ್ರವನ್ನು ನೀವು ತೆಗೆದು ಕಳುಹಿಸಿದರೆ ಸರ್ಕಾರ ನಿಮಗೆ 500 ರೂಪಾಯಿಗಳ ಬಹುಮಾನವನ್ನು ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನೋ ಪಾರ್ಕಿಂಗ್ ಸ್ಥಳಗಳಲ್ಲಿ ಕಾರು ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಆಗಾಗಿ ನೂತನ ಕಾನೂನು ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಇನ್ನುಂದೆ ನೋ ಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸಿದ ವಾಹನ ಮಾಲೀಕರಿಗೆ 1,000 ದಂಡ ವಿಧಿಸಲಾಗುತ್ತಿದೆ. ಈ ಫೋಟೋವನ್ನು ತೆಗೆದು ಕಳುಹಿಸುವವರಿಗೆ ಸರ್ಕಾರದಿಂದ ರೂ 500 ರು. ಬಹುಮಾನ ಸಿಗಲಿದೆ ಎಂದು ಗುರುವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಟ್ರಾಫಿಕ್ ಜಾಮ್ಗೆ ಕಾರಣವಾಗುವ ರಸ್ತೆಗಳಲ್ಲಿ ತಪ್ಪಾಗಿ ವಾಹನಗಳನ್ನು ನಿಲ್ಲಿಸುವ ಅಭ್ಯಾಸವನ್ನು ತಡೆಯುವ ಉದ್ದೇಶದಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ತಮ್ಮ ವಾಹನಗಳಿಗೆ ಪಾರ್ಕಿಂಗ್ ಸ್ಥಳಗಳನ್ನ ಸೃಷ್ಟಿಸಿಕೊಳ್ಳದ ಮತ್ತು ತಮ್ಮ ವಾಹನಗಳನ್ನು ನಿಲುಗಡೆ ಮಾಡಲು ರಸ್ತೆಗಳನ್ನು ಆಕ್ರಮಿಸಿಕೊಂಡಿರುವ ಜನರನ್ನು ಸಚಿವರು ತರಾಟೆಗೆ ತೆಗೆದುಕೊಂಡಿದ್ದಾರೆ.