ಕೊರೋನಾ ವೈರಸ್ ಮರಣ ಮೃದಂಗ ಆರಂಭಿಸಿದ ಚೀನಾದಲ್ಲಿ ತನ್ನ ಆರ್ಭಟವನ್ನು ಕಡಿಮೆ ಮಾಡಿದ್ದು, ಚೀನಾದಲ್ಲಿ ಸಾವಿನ ಸಂಖ್ಯೆ ಇಳಿಮುಖವಾಗಿದೆ. ಕೊರೋನಾ ವೈರಸ್ ಸಂಪೂರ್ಣ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಲು ಚೀನಾದ ವುಹಾನ್ ನಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ ಆಸ್ಪತ್ರೆಯನ್ನು ಮುಚ್ಚಲಾಯಿತು. ಕಳೆದ 34ದಿನಗಳಿಂದ ಚೀನಾದ 21 ಮೆಡಿಕಲ್ ತಂಡದ ಜೊತೆಗೆ 6 ಸ್ಥಳೀಯ ಮೆಡಿಕಲ್ ಕಾಲೇಜಿನ ಸದಸ್ಯರು ಸೇರಿಕೊಂಡು ಕೊರೋನಾ ಪೀಡಿತರಿಗೆ 24X7 ಚಿಕಿತ್ಸೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದೀಗ ಆಸ್ಪತ್ರೆಗೆ ದಾಖಲಾಗಿದ್ದ ಬಹುತೇಕರು ಗುಣಮುಖರಾಗಿದ್ದು, ಕೆಲವರ ಆರೋಗ್ಯ ಚೇತರಿಕೆ ಕಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿಯವರೆಗೆ ಚೀನಾದಲ್ಲಿ 80,754 ಪ್ರಕರಣ ದಾಖಲಾಗಿದ್ದು 3,136 ಮಂದಿ ಮೃತಪಟ್ಟಿದ್ದಾರೆ.
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...








