ಕರ್ನಾಟಕ ಮತ್ತು ತಮಿಳುನಾಡು ಪ್ರದೇಶಗಳಲ್ಲಿ ಚಂಡಮಾರುತದ ಪರಿಣಾಮ ಸ್ಪಷ್ಟವಾಗತೊಡಗಿದ್ದು, ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ತೀವ್ರ ಚಂಡಮಾರುತಕ್ಕೆ ರೂಪಾಂತರಗೊಳ್ಳುವ ಸಾಧ್ಯತೆಯಿದೆ. ಪ್ರಾದೇಶಿಕ ಹವಾಮಾನ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ, ಮತ್ತು ಇದರ ಪರಿಣಾಮವಾಗಿ ಜೋರಾದ ಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ರೈತರು ಮತ್ತು ಜನಸಾಮಾನ್ಯರು ಈ ಪರಿಸ್ಥಿತಿಗೆ ತಯಾರಾಗುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ಗಾಳಿಯ ವೇಗ 70ರಿಂದ 90 ಕಿಮೀ ವೆಗದಲ್ಲಿ ಬೀಸುವ ನಿರೀಕ್ಷೆಯಿರುವುದರಿಂದ, ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ.