ಬೆಂಗಳೂರು: ಸಿಎಂ ನೇತೃತ್ವದಲ್ಲಿನ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ 9823.31 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ (Capital Investment) ಯೋಜನೆಗಳಿಗೆ ಅನುಮೋದನೆ ಸಿಕ್ಕಿತು. ಸಿಎಂ ಸಿದ್ದರಾಮಯ್ಯ ಈ ಯೋಜನೆಗಳಿಗೆ ಒಪ್ಪಿಗೆ ಸೂಚಿಸಿದರು.
ಹೀಗಾಗಿ 5,605 ಜನರಿಗೆ ಉದ್ಯೋಗ ಸಿಗುವಂತಾಗುತ್ತಿದೆ. ಸಭೆಯಲ್ಲಿ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಯಿತು. ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 467 ಉದ್ಯೋಗ , ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಷರಿಂಗ್ ಪ್ರೈ.ಲಿ ಸಂಸ್ಥೆ ಯ 3425.60 ಕೋಟಿ ರೂ. ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ: ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರೂ. ಹೂಡಿಕೆಯಿಂದ 3,500 ಉದ್ಯೋಗ ಸೃಷ್ಠಿಯಾಗಲಿದೆ ಎಂದು ತಿಳಿದು ಬಂದಿದೆ.