ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಿಎಂ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ 150 ಹಾಸಿಗೆಗಳ ಸೌಲಭ್ಯವುಳ್ಳ ಕೋವಿಡ್ ಕೇರ್ ಸೆಂಟರ್ನ್ನು ಉದ್ಘಾಟಿಸಿದರು. ಹಾಗೂ ಗ್ರೀನ್-ಕೋ ಸಂಸ್ಥೆಯ ವತಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ಉಪಯೋಗಕ್ಕಾಗಿ 200 ಲಾರ್ಜ್ ಮೆಡಿಕಲ್ ಗ್ರೇಡ್ 10 ಎಲ್‍ಪಿಎಂ ಆಕ್ಸಿಜನ್ ಕಾನ್ಸೆನ್‍ಟ್ರೇಟರ್’ಗಳ ಸ್ವೀಕರಿಸಿದರು. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಕೆ.ಐ.ಎ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ. ಒ ಹರಿ ಮರಾರ್ , ಗ್ರೀನ್ ಕೋ ಗ್ರೂಪ್ ನ ಸಂಸ್ಥಾಪಕರಾದ ಅನಿಲ್ ಚಲಮಲಶೆಟ್ಟಿ ಹಾಗೂ ಮಹೇಶ್ ಕೊಹ್ಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದೇಶದಲ್ಲಿ ಕೋವಿಡ್ 2ನೇ ಅಲೆ ಭೀತಿಗೆ ಜನ ತತ್ತರಿಸಿ ಹೋಗಿದ್ದಾರೆ. ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ದೇಶದ , ಹಾಗೂ ರಾಜ್ಯ , ಬೆಂಗಳೂರಿನಲ್ಲೂ ಬ್ಲಾಕ್ ಫಂಗಸ್ ವೈರಸ್ ನ ಕಾಟ ಶುರುವಾಗಿದೆ.. ಇದ್ರಿಂದಾಗಿ ಈಗಾಗಲೇ ಹಲವು ಜೀವಗಳು ಹೋಗಿದವೆ. ಹೀಗಾಗಿ ಜನ ಮತ್ತಷ್ಟು ಆತಂಕ್ಕೆ ಒಳಗಾಗಿದ್ದಾರೆ. ಜನರು ಭಯದಲ್ಲೇ ಪ್ಯಾನಿಕ್ ಆಗುತ್ತಿದ್ದಾರೆ. ಸಣ್ಣ ನೆಗಡಿ , ಜ್ವರ ಕಾಣಿಸಿಕೊಂಡ್ರೂ ತಮಗೆ ಸೋಂಕಿದೆ ಎಂದು ಹೆದರಿಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.