ರಾಜೀನಾಮೆ ಸುಳಿವು ಕೊಟ್ಟ ಸಿಎಂ : ಜು.26ಕ್ಕೆ ಮುಹೂರ್ತ

1 min read
B S Yediyurappa Saaksha_tv

ರಾಜೀನಾಮೆ ಸುಳಿವು ಕೊಟ್ಟ ಸಿಎಂ : ಜು.26ಕ್ಕೆ ಮುಹೂರ್ತ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಸುದ್ದಿ ಮಾಡುತ್ತಿದ್ದರೂ ಎಲ್ಲೂ ತುಟಿಬಿಚ್ಚದ ಬಿ.ಎಸ್.ಯಡಿಯೂರಪ್ಪ ಇದೇ ಮೊದಲ ಬಾರಿ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ. ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ವರಿಷ್ಠರ ಸೂಚನೆಯಂತೆ 26ರಿಂದ ಕೆಲಸ ಆರಂಭಿಸಲಿದ್ದೇನೆ.

ಪಕ್ಷದಲ್ಲಿ ಯಾರಿಗೂ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ನನ್ನ ಕೆಲಸವನ್ನು ಮೆಚ್ಚಿ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಎಲ್ಲರೂ ನನಗೆ 79 ವರ್ಷದವರೆಗೂ ಅವಕಾಶ ಕೊಟ್ಟಿದ್ದಾರೆ.

ನಾಳೆಗೆ ನಾನು ಮುಖ್ಯಮಂತ್ರಿಯಾಗಿ ಎರಡು ವರ್ಷ ಆಗಲಿದೆ. ನನ್ನ ಉದ್ದೇಶ ಬರುವ ದಿನಗಳಲ್ಲಿ ಪಕ್ಷವನ್ನು ಬಲಪಡಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪವಾಗಿದೆ. ಅದೇ ಸಂಕಲ್ಪವನ್ನು ಈಗಲೂ ಮಾಡಿದ್ದೇನೆ ಎಂದರು.

CM B S Yediyurappa saaksha tv

ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಮುಂದಿನ ಸೂಚನೆಯನ್ನು ಕೊಡುತ್ತಾರೆ. ಅದರ ಆಧಾರದ ಮೇಲೆ ಜುಲೈ 26 ರಿಂದ ನನ್ನ ಕೆಲಸವನ್ನು ಪ್ರಾರಂಭ ಮಾಡಲಿದ್ದೇನೆ.

26 ರಂದು ಸರ್ಕಾರಕ್ಕೆ ಎರಡು ವರ್ಷವಾಗಿರುವ ಹಿನ್ನೆಲೆ ವಿಶೇಷ ಕಾರ್ಯಕ್ರಮವಿದೆ, ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ರಾಷ್ಟ್ರೀಯ ಅಧ್ಯಕ್ಷರು ಏನು ಸೂಚನೆ ಕೊಡುತ್ತಾರೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

ಇದೇ ವೇಳೆ ಬೆಂಬಲಿಗರ ಪ್ರತಿಭಟನೆ ಬಗ್ಗೆ ಮಾತನಾಡಿ, ಇಂದಿನಿಂದ ನನ್ನ ಪರವಾಗಿ ಹೇಳಿಕೆ ನೀಡುವುದು, ಪ್ರತಿಭಟನೆ ಮಾಡುವುದು ಸೂಕ್ತವಲ್ಲ ಅದನ್ನು ಮಾಡದೆ ಸಹಕಾರ ಕೊಡಿ ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd