ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಬಗ್ಗೆ ಸಿಎಂ ಸ್ಪಷ್ಟನೆ

1 min read
Night Curfew

ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಬಗ್ಗೆ ಸಿಎಂ ಸ್ಪಷ್ಟನೆ

ಬೆಂಗಳೂರು :ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದ್ದು, ಸಂಪೂರ್ಣ ಲಾಕ್ ಡೌನ್ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಸ್ಪಷ್ಟನೆ ನೀಡಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್ ಡೌನ್ ಇಲ್ಲ. ಹಾಲಿ ಇರುವ ಜನತಾ ಲಾಕ್ ಡೌನ್ ಮಾತ್ರ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

Lockdown

ಇನ್ನು ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಕೂರಬೇಕು. ಸ್ಥಳದಲ್ಲೇ ತೀರ್ಮಾನ ತೆಗೆದುಕೊಳ್ಳಬೇಕು, ಸಂಪೂರ್ಣ ಸ್ವತಂತ್ರ ಉಸ್ತುವಾರಿ ಸಚಿವರಿಗೆ ಕೊಟ್ಟಿದ್ದೇವೆ. ರಾಜ್ಯಕ್ಕೆ ಅಗತ್ಯ ಇರುವ ಆಕ್ಸಿಜನ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ರೆಮಿಡಿಸಿವರ್ ಔಷಧಿ ನಿರ್ವಹಣೆಗೆ, ಮಾನವಸಂಪನ್ಮೂಲ ನಿರ್ವಹಣೆಗೆ ಅಶ್ವಥನಾರಾಯಣ್ ಅವರಿಗೆ ಜವಾಬ್ದಾರಿ ಹೊರಿಸಲಾಗಿದೆ. ಬೆಡ್ ವ್ಯವಸ್ಥೆ, ಬೆಡ್ ಸಮಸ್ಯೆ ನಿರ್ವಹಣೆ ಜವಾಬ್ದಾರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್ ಗೆ ವಹಿಸಿದ್ದೇವೆ. ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣಾ ಜವಾಬ್ದಾರಿ ಅರವಿಂದ್ ಲಿಂಬಾವಳಿಗೆ ವಹಿಸಿರುವುದಾಗಿ ಸಿಎಂ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd