ಸಿಎಂ ಬದಲಾಗಲ್ಲ, ಆದ್ರೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಈಶ್ವರಪ್ಪ
ಶಿವಮೊಗ್ಗ : ಮುಖ್ಯಮಂತ್ರಿ ಬದಲಾವಣೆ ವಿಚಾರ ಬರೀ ಊಹಾಪೋಹ ಸುದ್ದಿ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗಲ್ಲ.
ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಮುಂದುವರಿಯುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಯಾರೂ ಏನೇ ಸರ್ಕಸ್ ಮಾಡಿದರೂ ಬಿಜೆಪಿ ಶಾಸಕರ ಒಗ್ಗಟ್ಟು ಮುರಿಯಲು ಸಾಧ್ಯವಾಗುವುದಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದರು.
ಈ ಬಗ್ಗೆ ಕೇಂದ್ರ ನಾಯಕರು ಈಗಾಗಲೇ ತೀರ್ಮಾನ ಕೈಗೊಂಡಾಗಿದೆ. ಆದ್ರೆ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧವಾಗಿರುತ್ತೇವೆ.
ಕೊರೊನಾ ಸಂದರ್ಭದಲ್ಲಿ ವಿಧಾನ ಮಂಡಲದ ಸಮಿತಿ ಸಭೆಯೇ ನಡೆಯುತ್ತಿಲ್ಲ. ಇನ್ನು ಸಂಪುಟ ಸಭೆ ನಡೆಸಲು ಕೂಡಾ ನಾವು ಹಿಂದೆ ಮುಂದೆ ನೋಡುತ್ತಿದ್ದೇವೆ. ಹಾಗಿರುವಾಗ ಈ ವಿಷಯದಲ್ಲಿ ತಲೆಕೆಡಿಸಿಕೊಳ್ಳಲ್ಲ ನಮ್ಮ ಶಾಸಕರಿಗೆ ಸಮಯವಿಲ್ಲ ಎಂದು ತಿಳಿಸಿದರು.










