ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ (Chief Minister) ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಇಂದು ಮಧ್ಯಾಹ್ನ ಇಡಿ ಮುಂದೆ ಹಾಜರಾದ ಮಲ್ಲಿಕಾರ್ಜುನ ಸ್ವಾಮಿ (Mallikarjunaswamy) ಅವರು ಸತತ ನಾಲ್ಕು ಗಂಟೆ ವಿಚಾರಣೆ ಎದುರಿಸಿದರು. ಸಂಜೆ ವೇಳೆಗೆ ವಿಚಾರಣೆ ಮುಗಿದ ನಂತರ ಮನೆಗೆ ತೆರಳಿದರು. ಎ-4 ಹಾಗೂ ಭೂಮಾಲೀಕ ದೇವರಾಜು ಹತ್ತಿರ ಜಮೀನು ಪಡೆದು ಸಿಎಂ ಪತ್ನಿಗೆ ಎ-3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಭೂಮಿ ನೀಡಿದ್ದರು. ಮುಡಾ ಪ್ರಕರಣದಲ್ಲಿ ಇಡಿ ವಿಚಾರಣೆ ಬಹುತೇಕ ಪೂರ್ಣಗೊಂಡಿದೆ. ಸದ್ಯದಲ್ಲೇ ಸಿಎಂ ಪತ್ನಿ ಪಾರ್ವತಿ ಹಾಗೂ ಸಿದ್ದರಾಮಯ್ಯ (Siddaramaiah) ಅವರಿಗೂ ನೋಟಿಸ್ ನೀಡುವ ಸಾಧ್ಯತೆ ಇದೆ.