ಸಿಎಂ ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ತೀರ್ಮಾನಗಳು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ, ಇಂದು ಮುಂಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಸ್ಥಿತಿ-ಗತಿ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ತೀರ್ಮಾನಗಳು ಹೀಗಿವೆ.
ಈ ಮೊದಲು ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದು
ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ ಐದರವರೆಗೂ ಜಾರಿಯಲ್ಲಿರಲಿದೆ.
ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಸದ್ಯಕ್ಕೆ ಹಿಂಪಡೆಯಲಾಗಿದೆ. ಆದ್ರೆ ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
ಮಾಲ್, ಹೋಟೆಲ್, ಬಾರ್, ಕ್ಲಬ್, ಪಬ್ ಗಳು ಶೇಕಡಾ 50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಗಿದೆ. ಆದ್ರೆ ಎರಡೂ ಲಸಿಕೆ ಪಡೆಯುವುದು ಕಡ್ಡಾಯ