ಪಠ್ಯದಲ್ಲಿ ಹೊಸ ವಿಷಯ ಸೇರ್ಪಡೆ : ಬೊಮ್ಮಾಯಿ ಮಾಹಿತಿ
ಬೆಂಗಳೂರು : ನವ ಉದ್ಯಮಕ್ಕೆ ಭದ್ರ ಬುನಾದಿ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ವರ್ಷದಿಂದ ಹೊಸ ವಿಷಯ ಸೇರ್ಪಡೆಗೆ ಮುಂದಾಗಿದೆ.
ಶಾಲೆ ಕಾಲೇಜುಗಳಲ್ಲಿ ಕೂಡ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆ, ವೈಜ್ಞಾನಿಕ ಚಿಂತನೆ ಅದಲ್ಲದೆ ನವ ಉದ್ಯಮಕ್ಕೆ ಭದ್ರ ಬುನಾದಿ ಹಾಕಬೇಕಾದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ರಾಷ್ಟ್ರೀಯ ನವ್ಯೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಮಾತಾಡಿರುವ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನವೋದ್ಯಮಿಗಳಿಗೆ, ಎಲಿವೇಟ್ ಉನ್ನತಿ ಕಾರ್ಯಕ್ರಮಗಳ ಮೂಲಕ ಆರ್ಥಿಕ ನೆರವು ನೀಡಲಾಗುತ್ತಿದೆ.
ಅಮೃತ ನವೋದ್ಯಮ ಯೋಜನೆಯಡಿ, ಓಬಿಸಿ ಹಾಗೂ ಅಲ್ಪಸಂಖ್ಯಾತರ 75 ಸ್ಟಾರ್ಟ್ ಅಪ್ ಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಮಹಿಳಾ ನವೋದ್ಯಮಿಗಳನ್ನು ಉತ್ತೇಜಿಸಲು, ಎಲಿವೇಟ್- 25 ಸ್ಟಾರ್ಟ್ ಅಪ್ ಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ರಾಜ್ಯದಲ್ಲಿ 482 ಸ್ಟಾರ್ಟ್ ಅಪ್ ಗಳಿಗೆ 120 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಲಾಗಿದೆ ಎಂದು ಅವರು ತಿಳಿಸಿದರು.
ಶಾಲೆಗಳಲ್ಲಿ ವೈಜ್ಞಾನಿಕ ಚಿಂತನೆ, ಉದ್ಯಮಶೀಲತೆಗೆ ಉತ್ತೇಜನ ನೀಡಲು, ಪಠ್ಯದಲ್ಲಿ ಈ ವಿಷಯಗಳನ್ನು ಸೇರಿಸಲು ತೀರ್ಮಾನಿಸಲಾಗಿದೆ.
150 ಐಟಿಐಗಳನ್ನು ಉನ್ನತೀಕರಿಸಲಾಗಿದೆ. ಡಿಪ್ಲೊಮಾ ಕಾಲೇಜುಗಳನ್ನು ಉನ್ನತೀಕರಿಸಲು ಯೋಜಿಸಲಾಗಿದೆ.
ಶಾಲೆ ಕಾಲೇಜುಗಳಲ್ಲಿ ವೈಜ್ಞಾನಿಕ ಚಿಂತನೆ , ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ ಹಾಕುವ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.









