ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ | ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕಮಿಟಿ ರಚನೆ
ಬೆಂಗಳೂರು: ಪಿಎಸ್ ಐ ನೇಮಕಾತಿಯಲ್ಲಿ ಕೇಳಿ ಬಂದ ಅಕ್ರಮ ಆರೋಪದ ಕುರಿತು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕಮಿಟಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಮಿಟಿ ನೀಡುವ ವರದಿ ಮೇಲೆ ಪರಾಮರ್ಶಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಪಿಎಸ್ಐಗೆ ಆಯ್ಕೆಯಾದರೂ ಇನ್ನೂ ನೇಮಕಾತಿ ಆದೇಶ ಸಿಕ್ಕಿಲ್ಲ, 545 ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, 3 ತಿಂಗಳು ಕಳೆದರೂ ಆಯ್ಕೆಯಾದವರು ನೇಮಕವಾಗಿಲ್ಲ. ಹಾಗಾಗಿ, ಕೂಡಲೇ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಮನವಿ ಮಾಡಿದರು.
ಇನ್ನೂ ಕೊರೊನಾ ಸಮಯದಲ್ಲಿ ಜೀವವನ್ನು ಪಣಕಿಟ್ಟು ದುಡಿದ ಆರೋಗ್ಯ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಈಗ ಕೊರೊನಾ ಕಡಿಮೆಯಾಗಿದ್ದು, ಏಕಾಏಕಿ ಅವರನ್ನು ಕೈ ಬಿಡುವುದ ಸರಿಯಲ್ಲ, ಕೂಡಲೇ ಮರು ನೇಮಕ ಮಾಡುವಂತೆ ಆರೋಗ್ಯ ಸಿಬ್ಬಂದಿಗೆ ಹೇಳಾಗುವುದು ಎಂದರು.
ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಬೆಲೆ ಎರಿಕೆ ವಿರುದ್ಧ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿ ಹೆಚ್ಚು ಬೆಲೆ ಏರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ಹೆಸರಿನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.