ಸಿದ್ದು ಪಶ್ಚಾತಾಪದ ಮಾತಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ..
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಚಿಕ್ಕಮಗಳೂರಿನಲ್ಲಿ ರಂಭಾಪುರಿ ಶ್ರೀಗಳನ್ನ ಬೇಟಿ ಮಾಡಿ ಆಶಿರ್ವಾದ ಪಡೆದುಕೊಂಡಿದ್ದರು. ಲಿಂಗಾಯತ ಧರ್ಮ ಪ್ರತ್ಯೇಕ ವಿಚಾರದಲ್ಲಿ ಸಿದ್ದು ಪಶ್ಚಾತಾಪ ಪಟ್ಟುಕೊಂಡಿದ್ದಾರೆ ಎಂದು ನಿನ್ನೆ ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳು ಹೇಳಿಕೆ ನೀಡಿದ್ದರು.
ಆದರೆ ಇಂದು ಸಿದ್ದರಾಮಯ್ಯ ಮತ್ತೆ ಯೂಟರ್ನ್ ಹೊಡೆದಿದ್ದಾರೆ. ಪಶ್ಚಾತಾಪ ಪಡುವಂತದ್ದೂ ಏನೂ ಇಲ್ಲ. ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ. ಲಿಂಗಾಯತ ಧರ್ಮ ಮಾಡುವ ವಿಚಾರ ಏನೇನಾಯ್ತು ಎಂದು ಶ್ರೀಗಳ ಬಳಿ ಮಾತನಾಡಿದೆ ಅಷ್ಟೆ ಎಂದು ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಪಶ್ಚಾತಾಪಕ್ಕೆ ಸಂಬಂಧಿಸಿ ಮಾಧ್ಯಮಗಳು ಸಿ ಎಂ ಬಳಿ ಪ್ರಶ್ನೆ ಕೇಳಿದ್ದಕ್ಕೆ ಸಿ ಎಂ ಮಾತನಾಡಿ “ರಂಭಾಪುರಿ ಶ್ರೀಗಳು ಮತ್ತು ಸಿದ್ದರಾಮಯ್ಯ ನಡುವೆ ನಡೆದ ಮಾತುಕತೆಯ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಲಿಂಗಾಯತ ಪ್ರತ್ಯೆಕ ಧರ್ಮ ವಿಚಾರ ಏನಾಯ್ತು ಅಂತ ಜಗತ್ತಿಗೆ ಗೊತ್ತಿದೆ. ಶ್ರೀಗಳು ಒಂದು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಒಂದು ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.








