jala shakti yojan | ಜಲಶಕ್ತಿ ಯೋಜನೆ ಘೋಷಿಸಿದ ಬೊಮ್ಮಾಯಿ
ರಾಜ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಪಕ್ಕದಲ್ಲಿ ಜಲಶಕ್ತಿ ಯೋಜನೆಗಳನ್ನು ಅನುಷ್ಠಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ನರವೇರಿತು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಯೋಜನೆಗಳನ್ನು ಬೆಳಗಾವಿಯಿಂದಲೇ ಆರಂಭಿಸುವುದಾಗಿ ಘೋಷಿಸಿದರು.
ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಢಾನಗೊಳಿಸಲಾಗುವುದು.
ರಾಜ್ಯದ ಎಲ್ಲ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.
ಇನ್ನು ಇದೇ ವೇಳೆ ಬೆಳಗಾವಿ ಸೇರಿ ರಾಜ್ಯದ ಇತರ ಕಡೆಯ ರಿಂಗ್ ರಸ್ತೆಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಿಎಂ ಬೊಮ್ಮಾಯಿ ಮನವಿ ಮಾಡಿಕೊಂಡರು.