ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡಲು 132 ಕೋಟಿ ಬಿಡುಗಡೆ – ಬಸವರಾಜ್ ಬೊಮ್ಮಾಯಿ…
ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ. ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ 132 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದ್ದೇನೆ . ಮಕ್ಕಳಿಗೆ ಶೂ ಮತ್ತು ಸಾಕ್ಸ್ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
2022-23ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ (ಎಸ್ಡಿಎಂಸಿ) ಮೂಲಕ ‘ಶೂ ಮತ್ತು ಸಾಕ್ಸ್’ ಖರೀದಿಸಿ, ವಿತರಿಸಲು ರಾಜ್ಯ ಸರ್ಕಾರ 132 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿದೆ ಎಂದು ಬಿ ಸಿ ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಭಿಕ್ಷೆ ಬೇಡಿಯಾದ್ರು ಯೂನಿಫಾರ್ಮ್, ಶೂ ಕೊಡಿಸುತ್ತೇವೆ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಹಿಂದೆ ಕೊವೀಡ್ ಸಂದರ್ಭದಲ್ಲಿ ಭಿಕ್ಷೆ ಬೇಡಿದ್ರಲ್ಲ ಆ ಹಣ ಎಲ್ಲಿ ಹೋಯ್ತ?. ಆ ಒಂದು ಕೋಟಿ ಎಲ್ಲಿ? ಅದೇ ರೀತಿ ಇದೂ ಕೂಡ ಎಂದು ತಿರುಗೇಟು ನೀಡಿದರು.