Karnataka | ಸಿಎಂ ಸಂಪುಟ ಸಭೆ : ಯಾವುದೆಲ್ಲ ಚರ್ಚೆಗೆ ಬರಲಿದೆ..?
ಪ್ರಮುಖ ವಿಚಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ
ಜಿಲ್ಲಾ ಉಸ್ತುವಾರಿ ನೇಮಕ ವಿಚಾರ ಸಂಬಂಧ ಚರ್ಚೆ
ಜಂಟಿ ಅಧಿವೇಶನದ ದಿನಾಂಕ ನಿಗದಿ ಮಾಡುವ ಸಾಧ್ಯತೆ
ಕೋವಿಡ್ ನಿಯಮ ಸಡಲಿಕೆ ವಿಚಾರ ಚರ್ಚೆ ಸಾಧ್ಯತೆ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಇಂದಿನ ಸಭೆಯಲ್ಲಿ ಕೋವಿಡ್ ನಿಯಮಾವಳಿ ಸಡಿಳಿಕೆ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
ಪ್ರಮುಖವಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಚಾರದಲ್ಲಿ ಸೃಷ್ಠಿಯಾಗಿರುವ ಅಸಮಾಧಾನದ ಬಗ್ಗೆ ಚರ್ಚಿಸಲಾಗುತ್ತದೆ. ಅಲ್ಲದೆ ಮುಂದಿನ ತಿಂಗಳಲ್ಲಿ ನಡೆಯಬೇಕಾದ ಜಂಟಿ ಅಧಿವೇಶನದ ದಿನಾಂಕವನ್ನು ನಿಗದಿ ಮಾಡುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಜಾರಿಯಲ್ಲಿರುವ ಕೊರೊನಾ ನಿಯಮ ಮತ್ತು ಬೆಂಗಳೂರಿನಲ್ಲಿ ಶಾಲೆಗಳು ಮತ್ತೆ ಆರಂಭಿಸುವುದರ ಬಗ್ಗೆ ಸಚಿವರು ಪ್ರಸ್ತಾಪಿಸಿದರೆ, ಈ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈಗಾಗಲೇ ಶಾಲೆ ಆರಂಭಿಸುವ ಬಗ್ಗೆ ಚರ್ಚಿಸುತ್ತೇವೆ ಎಂದಿದ್ದಾರೆ.
ಇದಲ್ಲದೇ ವಿದ್ಯಾವಿಕಾಸ ಪ್ರೋತ್ಸಾಹದಾಯಕ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ. ಬಿಡಿಎ, ಬಿಬಿಎಂಪಿ ಕುರಿತು ಚರ್ಚೆ ನಡೆಯಲಿದೆ.









