ಇಂದು ಅಥವಾ ನಾಳೆ ಸಂಪುಟ ರಚನೆ
ಬೆಂಗಳೂರು : ರಾಜ್ಯದಲ್ಲಿ ಸಂಪುಟ ವಿಸ್ತರಣೆ ಕಸರತ್ತು ಮುಂದುವರೆದಿದ್ದು, ಸಚಿವಾಕಾಂಕ್ಷಿಗಳ ಲಾಬಿ ನಡೆಸುತ್ತಲೇ ಇದ್ದಾರೆ. ಈ ಮಧ್ಯೆ ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಚಿವ ಸಂಪುಟ ರಚನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಶೀಘ್ರದಲ್ಲಿಯೇ ಅಂದರೇ ಇಂದು ಅಥವಾ ನಾಳೆ ಸಚಿವ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಇತ್ತ ಇಂದು ಬೆಳಗ್ಗೆಯೇ ಸಚಿವ ಸ್ಥಾನದ ಆಕಾಂಕ್ಷಿಗಳಾದ ಬಿ.ಸಿ.ಪಾಟೀಲ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಅಶ್ವತ್ಥ ನಾರಾಯಣ್ ಮತ್ತು ಕೆ.ಜಿ.ಬೋಪಯ್ಯ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಇನ್ನೊಂದೆಡೆ ಬುಧವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.









