CM Basavaraja Bommai | ಸುಗ್ರೀವಾಜ್ಞೆಗೆ ಮ ಮುಂದಿನ ಅಧಿವೇಶನದಲ್ಲಿ ಅನುಮೋದನೆ
ಹುಬ್ಬಳ್ಳಿ : ಪರಿಶಿಷ್ಠ ಜಾರಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಎ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಈ ಸುಗ್ರೀವಾಜ್ಞೆಗೆ ಮುಂದಿನ ಅಧಿವೇಶನದಲ್ಲಿ ಎರಡೂ ಸದನಗಳಿಂದ ಅನಮೋದನೆ ಪಡೆಯಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಯಾವುದೇ ವರ್ಗದ ಮೀಸಲಾತಿ ತೆಗೆಯುವುದಾಗಲಿ, ಸೇರ್ಪಡೆ ಮಾಡುವುದರ ಬಗ್ಗೆ ಯಾಗಲಿ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ.

ಏನೇ ಮಾಡಿದ್ರೂ ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನಲ್ಲಿಯೇ ಮಾಡಬೇಕು.
ಮೀಸಲಾತಿ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಸರ್ಕಾರದ ಮುಖ್ಯಸ್ಥನಾಗಿ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯಬೇಕು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ರಾಜ್ಯದ ಎಸ್ ಸಿ, ಎಸ್ ಟಿ ಸಮುದಾಯಗಳಿಗೆ ಕ್ರಮವಾಗಿ 2% ಮತ್ತು 4% ಮೀಸಲಾತಿಯನ್ನು ಹೆಚ್ಚಿಸಿದ್ದು, ಮೀಸಲಾತಿ ಪ್ರಮಾಣ 50% ರಿಂದ 56% ಹೆಚ್ಚಿಸಲಾಗಿದೆ.








