ಬಿಟ್ ಕಾಯಿನ್ ನಲ್ಲಿ ಕಾಂಗ್ರೆಸ್ಸಿಗರ ಹೆಸರು ಇದೆ : ಸಿಎಂ ಟಾಂಗ್
ಬೆಂಗಳೂರು : ಬಿಟ್ ಕಾಯಿನ್ ಹಗರಣ ವಿಚಾರವಾಗಿ ಕಾಂಗ್ರೆಸ್ – ಬಿಜೆಪಿ ನಾಯಕರ ಮಧ್ಯೆ ಟಾಕ್ ವಾರ್ ಮುಂದುವರೆದಿದ್ದು, ಇದೀಗ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ಬಿಟ್ ಕಾಯಿನ್ ಪ್ರಕರಣ ಸಿಎಂ ಬೊಮ್ಮಾಯಿ ಬಲಿ ಪಡೆಯಲಿದೆ.
ಈ ಬಾರಿಯೂ ಬಿಜೆಪಿಯಲ್ಲಿ ಮೂರನೇ ಸಿಎಂ ಬರಲಿದ್ದಾರೆ ಎನ್ನುವ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬಿಟ್ ಕಾಯಿನ್ ನಲ್ಲಿ ಕಾಂಗ್ರೆಸ್ಸಿಗರ ಹೆಸರು ಇದೆ. ಅದರ ಬಗ್ಗೆ ಯೋಚನೆ ಮಾಡಲಿ.
ಪಾಪ ಪ್ರಿಯಾಂಕ್ ಖರ್ಗೆಗೆ ಸರಿಯಾದ ಮಾಹಿತಿ ಪಡೆದುಕೊಳ್ಳೋದಕ್ಕೆ ಹೇಳಿ ಎಂದು ಟಾಂಗ್ ನೀಡಿದರು.
ಇದೇ ವೇಳೆ ದೆಹಲಿ ಭೇಟಿ ಬಗ್ಗೆ ಮಾಹಿತಿ ನೀಡಿದ ಅವರು, ಇಂದು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿದ್ದೇನೆ.
ಖಾಸಗಿ ಮಾಧ್ಯಮದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ. ನಾಳೆ ವಾಪಸ್ ಆಗುತ್ತೇನೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಡ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಗೆ ಸಮಯಾವಕಾಶ ಕೇಳಿದ್ದೇನೆ. ಅವಕಾಶ ಸಿಕ್ಕಲ್ಲಿ ಮಾತುಕತೆ ನಡೆಸಲಿದ್ದೇನೆ ಎಂದರು.









