ವಿಜಯಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ಸಿಎಂ ಬೊಮ್ಮಾಯಿ
ಬೆಂಗಳೂರು: ಸಧ್ಯ ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ನಾಳೆ ಮತ್ತು ನಾಡಿದ್ದು ಎರಡು ದಿನ ವಿಜಯಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ನಾಳೆ ಬೆಳಗ್ಗೆ 11.30ಕ್ಕೆ ವಿಜಯಪುರಕ್ಕೆ ತೆರಳಲಿರುವ ಸಿಎಂ ವಿಜಯಪುರದ ದೇವರ ಹಿಪ್ಪರಗಿಯಲ್ಲಿ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ತಾಳಿಕೋಟಿಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ನಂತರ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಅಲ್ಲಿ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜೈನ್ ಬಸದಿಗೆ ಭೇಟಿ ಕೊಡಲಿದ್ದು, ಮಧ್ಯಾಹ್ನ 1ಗಂಟೆಗೆ ಮೂಡಿಬಿದರೆ ಪ್ರೆಸ್ ಕ್ಲಬ್ನಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮುಲ್ಕಿ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮೂಡಬಿದಿರೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ವಿಡಿಯೋ ಕಾನ್ಫ್ರೆನ್ಸ್ನಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ರಾಜ್ಯದ ಕೊರೊನಾ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಾಲ್ಕನೇ ಅಲೆ ನಿಯಂತ್ರಣ ಬಗ್ಗೆ ಮುಂಜಾಗ್ರತಾ ಕ್ರಮಗಳ ಕುರಿತು ಪಿಎಂ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಮೂಡುಬಿದರೆಯಿಂದ ಹೊರಟು ರಾತ್ರಿ 7.45ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.