ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ – ಪ್ರೀತಂ ಗೌಡ
ಹಾಸನ : ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರ್ತಾರೆ ಎಂದು ಸಿಎಂ ಬದಲಾವಣೆ ವಿಚಾರವಾಗಿ ಎದ್ದಿರುವ ಊಹಾಪೋಹಗಳಿಗೆ ಹಾಸನದಲ್ಲಿ ಶಾಸಕ ಹೇಳಿಕೆ ನೀಡಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆದಿರುವ ವಿಚಾರ ಮತ್ತು ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ ಮಾತನಾಡಿರೋ ಅವರು ಸೂರ್ಯ ಚಂದ್ರರಿರುವಷ್ಟೇ ಸತ್ಯ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿ ಆಗಿರ್ತಾರೆ,
ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತೆ. ನಾಯಕತ್ವ ಬದಲಾವಣೆ ಕಪೋಲಕಲ್ಪಿತ, ಬಾಲಿಶ. ಕೊರೋನ ಕಾಲದಲ್ಲಿ ನಾಯಕತ್ವ ಬದಲಾವಣೆ ಆದರೆ ಜನಾಕ್ರೋಷ ಆಗುತ್ತೆ, ಜನ ಛೀ ಥೂ ಅಂತಾರೆ. 20 ಜನ ಡೆಲ್ಲಿಗೆ ಹೋಗಿರೋದೆ ಕಪೋಲಕಲ್ಪಿತ, 49 ಜನ ಡೆಲ್ಲಿಗೆ ಹೋದ್ರು ಬದಲಾವಣೆ ಆಗಲ್ಲ. ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರ್ತಾರೆ. ಮುಂಬರುವ ಚುನಾವಣೆ ಕೂಡ ಅವರ ನಾಯಕತ್ವದಲ್ಲೇ ನಡೆದು ಬಹುಮತ ಬರಲಿದೆ ಎಂದಿದ್ದಾರೆ.
ಇನ್ನೂ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ನಾಯಕತ್ವ ಬದಲಾವಣೆ ಬಗ್ಗೆ ಕನಸಲ್ಲೂ ಯೋಚನೆ ಮಾಡಬಾರದು. ಮುಂದೊಂದು ದಿನ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಚುನಾವಣೆ ನಡೆದು ಮುಖ್ಯಮಂತ್ರಿ ಆಗ್ತಾರೆ ಮತ್ತೊಂದು ಸ್ಥಾನಕ್ಕೂ ಹೋಗ್ತಾರೆ. ಆದರೆ ಈ ಅವಧಿಯಲ್ಲಿ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರ್ತಾರೆ. ನಾವೆಲ್ಲರೂ ಅವರ ಪರವಾಗಿ ಇರುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ ಹಾಗಿದ್ದರೆ ಶಾಸಕರಾದ ನಮಗೆ ತಿಳಿಯುತ್ತಿತ್ತು ಎಂದಿದ್ದಾರೆ.
ರಾಜ್ಯ ಬಿಜೆಪಿಗೆ ಮತ್ತೆ ಆವರಿಸಿಕೊಂಡ ಬಂಡಾಯದ ಸೋಂಕು..! ಸಿಎಂ ಬಿಎಸ್ ವೈಗೆ ಇದು ಕೋವಿಡ್‍ಗಿಂತಲೂ ಮಾರಕ…!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








