ಇನ್ನೂ 3 – 4 ದಿನದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ – ಬೊಮ್ಮಾಯಿ
ಬೆಂಗಳೂರು: ಸಿಎಂ ಬಿ ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.. ಹತ್ತಾರು ನಾಯಕರ ಹೆಸರು ಸಿಎಂ ರೇಸ್ ನಲ್ಲಿದೆ.. ಇಂದು ಸಂಜೆ ಶಾಸಕಾಂಗ ಸಭೆಯ ನಂತರ ನೂತನ ಸಿಎಂ ಘೋಷಣೆಯಾಗುವ ನಿರೀಕ್ಷೆಯೂ ಇದೆ.. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ಆಯ್ಕೆ ಮಾಡುತ್ತಾರೆ. 3 -4 ದಿನಗಳಲ್ಲಿ ಎಲ್ಲವೂ ಅಂತಿಮ ಆಗಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಕೇಂದ್ರ ಕೋರ್ ಕಮಿಟಿ, ಪಾರ್ಲಿಮೆಂಟರಿ ಬೋರ್ಡ್‍ನಲ್ಲಿ ಸಭೆ ನಡೆಯುತ್ತಿದೆ. ಸಿಎಂ ಆಯ್ಕೆ ಸಂಬಂಧ ದೆಹಲಿಯಲ್ಲಿ ಸರಣಿ ಮೀಟಿಂಗ್ ನಡೀತಾ ಇವೆ. ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲವೂ ಅಂತಿಮ ಆಗಲಿದೆ. ನನ್ನ ಹೆಸರೂ ಸಹ ಮಾಧ್ಯಮಗಳಲ್ಲಿ ಬರುತ್ತಿದೆ. ಹೈಕಮಾಂಡ್ ಸಭೆಯಲ್ಲಿ ಯಾವ ಆಯಾಮದಲ್ಲಿ ಚರ್ಚೆ ಆಗಿದೆ ಎಂಬ ಮಾಹಿತಿ ಸಿಕ್ಕಿಲ್ಲ ಎಂದಿದ್ದಾರೆ. ಇವತ್ತು ಧರ್ಮೇಂದ್ರ ಪ್ರಧಾನ್ ಬರ್ತಾ ಇದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಬರುವ ಸಾಧ್ಯತೆ ಇದೆ. ಆದಷ್ಟು ಬೇಗ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮುಂದಿನ ಮೂರ್ನಾಲ್ಕು ದಿನದಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ. ಶಾಸಕಾಂಗ ಕಮಿಟಿ, ಕೋರ್ ಕಮಿಟಿ, ಪಾರ್ಲಿಮೆಂಟರಿ ಬೋರ್ಡ್ ಅಭಿಪ್ರಾಯದ ಮೇರೆಗೆ ಸಿಎಂ ಆಯ್ಕೆ ಅಂತಿಮ ಆಗುತ್ತೆ. ನನ್ನ ಜಿಲ್ಲೆಯ ಶಾಸಕರು ನನ್ನ ಸಿಎಂ ಆಗಬೇಕು ಅಂತ ಇಚ್ಛೆ ಪಡೋದ್ರಲ್ಲಿ ವಿಶೇಷ ಇಲ್ಲ. ಪಕ್ಷ ಏನ್ ನಿರ್ಧಾರ ಮಾಡುತ್ತದೆ ಅನ್ನೋದು ಮುಖ್ಯ ಎಂದು ತಿಳಿಸಿದ್ದಾರೆ.
ಅಲ್ಲದೇ ಬಿಜೆಪಿಯ ಮುಂದಿನ ಮುಖ್ಯಮಂತ್ರಿಯೂ ಭ್ರಷ್ಟಚಾರಿಯಾಗಿರುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ಕೊಟ್ಟಿರುವ ಬೊಮ್ಮಾಯಿ ಅವರು , ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ದವರು. ಬಳಿಕ ಚುನಾವಣೆಯಲ್ಲಿ ಸೋತವರು. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ಈ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಹೊಸ ಮುಖ್ಯಮಂತ್ರಿ ಆಗದ ಸಂಧರ್ಭದಲ್ಲಿ, ಜನರಲ್ಲಿ ಇಂತಹ ಮನಸ್ಥಿತಿ ಹುಟ್ಟಿಸುವಂತ ಮಾತಗಳನ್ನ ಮಾಜಿ ಮುಖ್ಯಮಂತ್ರಿ ಆಡುವಂತದ್ದಲ್ಲ ಎಂದು ಕಿಡಿಕಾರಿದ್ದಾರೆ. ಮತ್ತೊಂದು ಗಮನಿಸಬೇಕಾದ ವಿಚಾರ ಎಂದ್ರೆ ಯಡಿಯೂರಪ್ಪ ನಂತರ ಯಾರು ಸಿಎಂ ಆಗಲಿದ್ದಾರೆ ಎಂಬ ಚರ್ಚೆ ನಡುವೆ , ಸಿಎಂ ರೇಸ್ ನಲ್ಲಿ ಬಸವವರಾಜ ಬೊಮ್ಮಾಯಿ ಅವರ ಹೆಸರು ಕೂಡ ಕೇಳಿ ಬರ್ತಾಯಿದೆ.. ಅಶ್ವಥ್ ನಾರಾಯಣ್ , ಸಿಟಿ ರವಿ , ಪ್ರಹ್ಲಾದ್ ಜೋಷಿ , ನಿರಾಣಿ , ಆರ್ ಅಶೋಕ್ ಸೇರಿ ಇನ್ನೂ ಹಲವರ ಹೆಸರುಗಳು ಮುಂಚೂಣಿಯಲ್ಲಿದೆ..








