ಸಿಎಂ ಬಿಎಸ್ ವೈ ಜೊತೆ ಹೆಚ್ ಡಿಕೆ ಭೇಟಿ – ಕುತೂಹಲ ಕೆರಳಿಸಿದ ಉಭಯ ನಾಯಕರ ನಡೆ
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದಾರೆ.. ಉಭಯ ನಾಯಕರ ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.. ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಇನ್ನೂ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ನಂತರ ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಮಂಡ್ಯದಲ್ಲಿ ಪ್ರಸಿದ್ದ ಕಾರ್ಖಾನೆ ಮೈ ಶುಗರ್ ಅನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂಬುದಾಗಿ ಜಿಲ್ಲೆಯ ರೈತರು ಮೊನ್ನೆ ಭೇಟಿಯಾಗಿ ಹೇಳಿದ್ದರು. ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರೊಂದಿಗೂ ಚರ್ಚಿಸುವಂತೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿರೋದಾಗಿ ತಿಳಿಸಿದರು.
ಅಲ್ಲದೇ ಮೈ ಶುಗರ್ ಕಾರ್ಖಾನೆ ಜಿಲ್ಲೆಯ ಪ್ರಸಿದ್ಧ ಶುಗರ್ ಕಾರ್ಖಾನೆಗಳಲ್ಲಿ ಒಂದಾಗಿದೆ. ಈ ಕಾರ್ಖಾನೆಯಲ್ಲಿ ತೆರೆಮರೆಯಲ್ಲಿ ಖಾಸಗೀಕರಣ ಮಾಡೋದು ಸರಿಯಲ್ಲ ಎಂದು ಸಿಎಂ ಅವರಲ್ಲಿ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದ್ರು.