ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ : ಸಭೆ ಬಳಿಕ ಸಿಎಂ ಹೇಳಿದ್ದೇನು..?
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಜೋರಾಗಿದ್ದು ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಪ್ರಶ್ನೆಗಳು ಎದ್ದಿದ್ದವು. ಇದೀಗ ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಈ ಬಗ್ಗೆ ಪ್ರಮುಖ ತಜ್ಞರು, ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆಗೆ ಕೋವಿಡ್ 19 ಪರಿಸ್ಥಿತಿ ಅವಲೋಕನ ಕುರಿತು ಸಭೆ ನಡೆಸಿದ್ದರು.
VIDEO : ಹೊರಗಡೆ ಊಟ ಮಾಡೋ ಮುನ್ನ ದಯವಿಟ್ಟು ಎಚ್ಚರ : ಮೀರತ್ ಆಯ್ತು ಈಗ ಗಾಝಿಯಾಬಾದ್… ರೋಟಿಗೆ ಉಗುಳಿದ ಕಿಡಿಗೇಡಿ..!
ಸಭೆ ಬಳಿಕ ಸುದ್ದಿಗೋಷ್ಠಿ ನಡಿಸಿರುವ ಸಿಎಂ ಯಡಿಯೂರಪ್ಪ ಅವರು, ಕೆಲ ಪ್ರಮುಖ ತಜ್ಞರ ಜೊತೆ ಸಮಾಲೋಚನೆ ಮಾಡಲಾಗಿದೆ. 14 ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಲಸಿಕೆಯ ಪ್ರಮಾಣ ಹೆಚ್ಚಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ದಾರಣೆ ಕಡ್ಡಾಯ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಕೋವಿಡ್ ನಿಯಮಗಳ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ ದಂಡ ವಿಧಿಸಲಾಗುತ್ತೆ. ಅಪಾರ್ಟ್ ಮೆಂಟ್ ಗಳಲ್ಲಿ ನಿಗಾವಹಿಸಲು ಹೇಳಿದ್ದಾರೆ. ಪರೀಕ್ಷೆ ಪ್ರಮಾಣ ಹೆಚ್ಚಳ ಮಾಡಲು ಹೇಳಿದ್ದಾರೆ. ಮದುವೆ ಸಮಾರಂಭಗಳಲ್ಲಿ 500ಕ್ಕೂ ಹೆಚ್ಚು ಜನ ಇರಬಾರದು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಏಕಾಂತದಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಗುಂಪು : ಯುವತಿಯ ದುಪಟ್ಟಾ ಎಳೆದು ಹಲ್ಲೆ ನಡೆಸಿರುವ ವಿಡಿಯೋ ವೈರಲ್..!
ಇದೇ ವೇಳೆ ಹಿರಿಯ ನಾಗರಿಕರಿಗೆ ಲಸಿಕೆ ನೀಡುವಂತೆ ತಜ್ಞರು ಸಲಹೆ ಕೊಟ್ಟಿದ್ದಾರೆ. ಮತ್ತೊಮ್ಮೆ ಲಾಕ್ ಡೌನ್ ಆಗಬಾರದು ಎಂಬ ಅಪೇಕ್ಷೆ ಇದ್ರೆ ದಯಮಾಡಿ ಕೋವಿಡ್ ನಿಯಮಗಳನ್ನ ಪಾಲಿಸಿ. ಸರ್ಕಾರದ ಜೊತೆಗೆ ಕೈಜೋಡಿಸಿ.ಎಲ್ಲವೂ ನಿಮ್ಮ ಕೈಯಲ್ಲೇ ಇದೆ ಎಂದಿದ್ದಾರೆ ಸಿಎಂ ಬಿಎಸ್ ವೈ.








